ಮಂಗಳೂರು (ದಕ್ಷಿಣ ಕನ್ನಡ): ಕರ್ನಾಟಕ ಸಲಫಿ ಅಸೋಸಿಯೇಷನ್‌ನ ವಿದ್ಯಾರ್ಥಿ ಘಟಕ ಮತ್ತು ವಿಸ್ಟಮ್ ಸ್ಟಡೆಂಟ್ ಜಂಟಿಯಾಗಿ ಫೆ.2ರಂದು ಬೆಳಗ್ಗೆ 8.30ಕ್ಕೆ ಮಂಗಳೂರು ನಗರದ ಪುರಭವನದಲ್ಲಿ ‘ಟೀನ್‌ಸ್ಪೇಸ್’ ಎಂಬ ವಿದ್ಯಾರ್ಥಿ ವಿಚಾರಗೋಷ್ಠಿಯನ್ನು ಹಮ್ಮಿಕೊಂಡಿದೆ ಎಂದು ಸಂಸ್ಥೆಯ ಖಲೀಲ್ ತಲಪಾಡಿ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ವಿಚಾರಗೋಷ್ಠಿಯಲ್ಲಿ ಹತ್ತನೇ ತರಗತಿ, ಪದವಿ ಪೂರ್ವ ಹಾಗೂ ಪದವಿಯ ವಿದ್ಯಾರ್ಥಿಗಳು ನೋಂದಣಿ ಮಾಡಬಹುದು. ಪ್ರವೇಶ ಉಚಿತವಾಗಿರುತ್ತದೆ. ಸಂಜೆ 5:30ರವರೆಗೆ ಕಾರ್ಯಕ್ರಮ ನಡೆಯಲಿದೆ. ಡ್ರಗ್ಸ್, ಮಾನಸಿಕ ಖಿನ್ನತೆ, ದ್ವೇಷ, ಅಪರಾಧ ಚಟುವಟಿಕೆ ಇತ್ಯಾದಿಗಳಲ್ಲಿ ಬಲಿಯಾಗುತ್ತಿರುವ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.
ಈ ವಿಚಾರಗೋಷ್ಠಿಯಲ್ಲಿ ವಿವಿಧ ವಿಷಯಗಳಲ್ಲಿ ಚರ್ಚೆ, ವಿಷಯ ಮಂಡಿಸಲು ಅನುಭವಿ ವಿದ್ವಾಂಸರು, ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ ಖಾದರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಹಾಫಿಝ್ ರಾಝಿಕ್ ಸೌದಾಗರ್ ಮುಂತಾದವರು ಭಾಗವಹಿಸಲಿದ್ದಾರೆ. ಡಾ.ಹಫೀಝ್ ಸ್ವಲಾಹಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.