Saturday, April 19, 2025
Google search engine

Homeಅಪರಾಧಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು(ದಕ್ಷಿಣ ಕನ್ನಡ): 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಉರ್ವ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಜಪ್ಪಿನಮೊಗರುವಿನ ಪ್ರೀತಮ್ ಆಚಾರ್ಯ(38) ಬಂಧಿತ ಆರೋಪಿ. ಆರೋಪಿಯನ್ನು ಪೊಲೀಸರು ಮುಂಬೈಯಲ್ಲಿ ವಶಕ್ಕೆ ತೆಗೆದುಕೊಂಡಿದ್ದರು. ಈತ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಅ.ಕ್ರ ನಂಬ್ರ 89/2009 ಕಲಂ ಐಪಿಸಿ 403, 406, 408, 409, 415, 417, 420 ಐಪಿಸಿ ದಾಖಲಾಗಿತ್ತು.

ಈತನು ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ ಈತನ ವಿರುದ್ಧ ಎಲ್.ಪಿ.ಸಿ ವಾರೆಂಟ್ ಜಾರಿಯಾಗಿದ್ದು, ಈತನು ಹೋಟೆಲ್‌ ನಲ್ಲಿ ಮ್ಯಾನೇಜರ್ ಆಗಿ ಕೆಲಸದಲ್ಲಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್, ಕಾನೂನು ಸುವ್ಯವಸ್ಥೆ ವಿಭಾಗದ ವೆಸ್ಟ್ ಮುಂಬೈ ಉಪ ಪೊಲೀಸ್ ಆಯುಕ್ತರಾದ ಅಂಶುಕುಮಾರ್, ಅಪರಾಧ ಸಂಚಾರ ವಿಭಾಗದ ಪೊಲೀಸ್ ಉಪ ಆಯುಕ್ತರಾದ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಕೇಂದ್ರ ಉಪ ವಿಭಾಗದ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರರಾದ ಮಹೇಶ್ ಕುಮಾರ್ ರವರ ಮಾರ್ಗದರ್ಶನದಂತೆ, ಉರ್ವ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಭಾರತಿ ಜಿ ರವರ ನೇತೃತ್ವದಲ್ಲಿ ಉರ್ವ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಹರೀಶ್ ಹೆಚ್.ಎ. ಸಹಾಯಕ ಪೊಲೀಸ್ ಉಪ ನಿರೀಕ್ಷಕ ಉಲ್ಲಾಸ್ ಮಹಲೆ, ಎಚ್.ಸಿ-ಸುಧಾಕರ್, ಮಹಿಳಾ ಕಾನ್ ಸ್ಟೇಬಲ್ ಸಫ್ರೀನಾ ವಿಶೇಷ ಕರ್ತವ್ಯದಲ್ಲಿ ಮುಂಬೈಗೆ ತೆರಳಿ ಈತನು ಕೆಲಸ ಮಾಡುವ ಹೊಟೇಲ್ ನಿಂದ ವಶಕ್ಕೆ ಪಡೆದಿದ್ದರು.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

RELATED ARTICLES
- Advertisment -
Google search engine

Most Popular