ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಗದೀಶ್ ಪೂಜಾರಿ (37) ಬಂಧಿತರು.
ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಆರೋಪಿಯನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.