ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಕಂಕನಾಡಿಯಲ್ಲಿ ಸಂಜೆಯಾಗುತ್ತಿದ್ದಂತೆ ತಲೆ ಎತ್ತುತ್ತಿದ್ದ ಫಾಸ್ಟ್ ಫುಡ್ ಅಂಗಡಿಗಳಿಂದ ಇತ್ತೀಚೆಗೆ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ. ವಾಹನ ದಟ್ಟಣೆ ಹೆಚ್ಚಾಗಿರುವ ಸಮಯದಲ್ಲೇ ತೆರೆದುಕೊಳ್ಳುವ ಈ ಅಂಗಡಿಗಳು ಗ್ರಾಹಕರಿಗಾಗಿ ರಸ್ತೆಗೆ ಹೊಂದಿಕೊಂಡೇ ಟೆಬಲ್ ಚಯರ್ ಹಾಕುತ್ತಿದ್ದಾರೆ.

ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುವವರು ರಸ್ತೆಗೆ ಇಳಿದು ನಡೆದುಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಈಗಾಗಲೇ ಹಲವು ಬಾರಿ ಸೂಚನೆ ನಿಡಿದ್ರೂ ಪದೆ ಪದೆ ರಸ್ತೆಗೆ ಹೊಂದಿಕೊಂಡು ಫುಟ್ ಪಾತ್ ಅತಿಕ್ರಮಿಸಿ ತಮ್ಮ ವ್ಯವಹಾರ ನಡೆಸುತ್ತಿದ್ದಾರೆ. ಹೀಗಾಗಿ ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಗೆ ಸಾರ್ವಜನಿಕರು ದೂರು ನೀಡಿದ್ದಾರೆ.
ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ನಗರಪಾಲಿಕೆ ಅಧಿಕಾರಿಗಳು ಫಾಸ್ಟ್ ಫುಡ್ ಅಂಗಡಿಯನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ. ನಗರದಲ್ಲಿ ಹಲವೆಡೆ ಫುಟ್‌ಪಾತ್‌ನಲ್ಲಿ ಫಾಸ್ಟ್‌ಫುಡ್ ಅಂಗಡಿಗಳು ನಡೆಯುತ್ತಿದ್ದು, ಕೆಲವೆಡೆ ಇದೇ ರೀತಿಯ ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸ್ಟ್ರೀಟ್‌ಫುಡ್ ವ್ಯಾಪಾರಿಗಳಿಗೂ ತೊಂದರೆ ಆಗದ ರೀತಿಯಲ್ಲಿ ಸಮಸ್ಯೆ ಬಗೆಹರಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.