ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಜನವರಿ 11ಕ್ಕೆ ಮಂಗಳೂರಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಸಿಎ ಜಗನ್ನಾಥ್ ಕಾಮತ್ ಹೇಳಿದ್ದಾರೆ. ಅವರು ಗುರುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಹೊಟೇಲ್ ಹಾಲ್ ನಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಈ ಕುರಿತು ಮಾಹಿತಿ ನೀಡಿದರು. ಮಂಗಳೋತ್ಸವದ ಪೂರ್ವಭಾವಿಯಾಗಿ ಜನವರಿ ಐದಕ್ಕೆ ಕರ್ನಾಟಕ, ಕೇರಳದಿಂದ ಹೊರೆಕಾಣಿಕಾ ಸೇವಾ ಸಮರ್ಪಣೆ ನಡೆದಿದೆ. ದೇಶದ ವಿವಿಧೆಡೆಗಳಿಂದ ವ್ಯಾಸಧ್ವಜ ಸಂಕೀರ್ತನಾ ಪಾದಯಾತ್ರೆ ಮಂಗಳೂರಿಗೆ ಆಗಮಿಸುತ್ತಿದೆ ಎಂದ ಅವರು, ಬರುವ ಭಾನುವಾರ ಶ್ರೀ ಕಾಶಿಮಠ ಸಂಸ್ಥಾನದ ಕೊಂಚಾಡಿಯಲ್ಲಿರುವ ಶಾಖಾಮಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಅಂದ್ರು. ಭಜನಾ ಸಂಕೀರ್ತನಾ ವ್ಯಾಸಧ್ವಜ ಮತ್ತು ಸ್ವಾಮೀಜಿಯವರ ಪಾದುಕಾ ದಿಗ್ವಿಜಯ ಪಾದಯಾತ್ರೆ ನಡೆಯಲಿದೆ. ಇದೇ ವೇಳೆ ವಿವಿಧ ಊರ ಭಜನಾ ಮಂಡಳಿಗಳು ದೇವರ, ಸ್ವಾಮೀಜಿಯವರ ಭಜನೆಯನ್ನು ಹಾಡುತ್ತಾ ಪಾದಯಾತ್ರೆಯಲ್ಲಿ ಭಾಗವಹಿಸಲಿದೆ ಅಂದ್ರು. ಸುದ್ದಿಗೋಷ್ಟಿಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್, ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ, ಆಲ್ ಟೆಂಪಲ್ ಅಸೋಸಿಯೇಶನ್ ಅಧ್ಯಕ್ಷ ಅತುಲ್ ಕುಡ್ವ, ಪ್ರಮುಖರಾದ ಕೋಟೇಶ್ವರ ದಿನೇಶ್ ಕಾಮತ್, ವಾಸುದೇವ್ ಕಾಮತ್, ರಘುವೀರ್ ಭಂಡಾರಕಾರ್, ಟಿ. ಗಣಪತಿ ಪೈ ಹಾಗೂ ಮುಖಂಡರು ಉಪಸ್ಥಿತರಿದ್ದರು.
ವರದಿ: ಶಂಶೀರ್ ಬುಡೋಳಿ



