ಮಂಗಳೂರು (ದಕ್ಷಿಣ ಕನ್ನಡ): 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ಪೊಲೀಸ್ ಠಾಣಾ ಅಕ್ರ 115/2018 ಕಲಂ 504, 354(a) ಐಪಿಸಿ ಪ್ರಕರಣದಲ್ಲಿನ ಆರೋಪಿ ರವಿಂದ್ರ ಬಿ.ಎನ್ ಎಂಬವರು ಸುಮಾರು 7 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಹೀಗಾಗಿ LPC No 04/2023 ರಂತೆ ವಾರೆಂಟ್ ಹೊರಡಿಸಿದ್ದು LPC ವಾರೆಂಟ್ ಆಸಾಮಿಯಾದ ರವೀಂದ್ರ ಎಂಬಾತ ನನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯ್ತು.