ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಸಿಸಿಬಿ ಪೊಲೀಸರು MDMA ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ಇರ್ಷಾದ್, ಬಂಧಿತ ವ್ಯಕ್ತಿ.
ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ಓರ್ವ ವ್ಯಕ್ತಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿತನಿಂದ 70 ಸಾವಿರ ರೂಪಾಯಿ ಮೌಲ್ಯದ 12 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ವಿವರ:
1) 12 ಗ್ರಾಂ MDMA ಮಾದಕ ವಸ್ತು-(70,000)
2) VIVO ಕಂಪನಿಯ ಮೊಬೈಲ್ ಪೋನ್1-(10,000)
3) ಡಿಜಿಟಲ್ ತೂಕ ಮಾಪನ -1
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 70,000/- ರೂ ಆಗಬಹುದು.
ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ ಈ ಆರೋಪಿಗಳ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿ ಪಾಲ್ಗೊಂಡಿದ್ದರು.