ಮಂಗಳೂರು: ದೇವಸ್ಥಾನದ ಬಳಿ ಪ್ರಚಾರ ನಡೆಸುವ ವಿಚಾರವಾಗಿ ಮಂಗಳೂರು ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿರುವ ಘಟನೆ ನಗರದ ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ ಬಳಿ ನಡೆದಿದೆ.
ರಾಮ ನವಮಿ ಉತ್ಸವ ನಡೆಯುತ್ತಿದ್ದ ಮಂದಿರದ ಹೊರ ಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಕೈ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹೊತ್ತಲ್ಲೇ ವಾಗ್ವಾದ ತಾರಕಕ್ಕೇರಿ ನೂಕು ನುಗ್ಗಲು ಉಂಟಾಗಿದೆ.
ಸ್ಥಳಕ್ಕೆ ಶಾಸಕ ವೇದಾವ್ಯಾಸ್ ಕಾಮತ್,ಮಿಥುನ್ ರೈ ದೌಡಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪೊಲೀಸರು ಗುಂಪು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.