ಮಂಗಳೂರು (ದಕ್ಷಿಣ ಕನ್ನಡ): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ದ ಹಣದ ಅಕ್ರಮ ವರ್ಗಾವಣೆಯ ಸುಳ್ಳಾರೋಪ ಹೊರಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ವಿರುದ್ಧ ದಕ್ಷಿಣ ಕನ್ನಡಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಮಂಗಳೂರು ಯೆಯ್ಯಾಡಿಯ ಶಂಕರ್ ಹೊಟೇಲ್ ಬಳಿಯ ಇಡಿ ಕಚೇರಿ ಎದುರು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಇದೇ ವೇಳೆ ಮಾಜಿ ಸಚಿವ ಬಿ. ರಮಾನಾಥ ರೈಯವರು ಭಾಗವಹಿಸಿ ಮಾತನಾಡಿದರು.