ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬ್ರೋಕರ್ಗಳ ಹಾವಳಿಯಿಂದ ಬೇಸತ್ತಿರುವ, ಆಯುಕ್ತೆ ನೂರ್ ಝಹರಾ ಖಾನಂ ಇದೀಗ ಪೊಲೀಸ್ ದೂರು ನೀಡಿದ್ದಾರೆ. ತಮ್ಮ ಮೇಲೆ ವಾಮಾಚಾರ ಮಾಡುವ ಹಾಗೂ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಮುಡಾ ಕಚೇರಿಗೆ ನುಗ್ಗಿ ಅಕ್ರಮ ಎಸಗುವ ಬ್ರೋಕರ್ಗಳನ್ನು ತಡೆದಿರುವುದಕ್ಕಾಗಿ ಅವರು ಈ ಬೆದರಿಕೆ ಒಡ್ಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಆಯುಕ್ತರು ಈ ಬಗ್ಗೆ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಬ್ರೋಕರ್ ವಹಾಬ್ (45) ಮತ್ತು ಅಸಿಸ್ಟೆಂಟ್ ಬ್ರೋಕರ್ ಸಾಬಿತ್ (25) ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ. ಮೌಢ್ಯ ನಿರ್ಬಂಧ ಕಾಯ್ದೆ 2020ರ ಅಡಿಯಲ್ಲೇ ಕೇಸು ದಾಖಲಿಸಬೇಕೆಂದು ಕಮಿಷನರ್ ದೂರು ನೀಡಿದ್ದಾರೆ. ಸದ್ಯ ಬಿಎನ್ಎಸ್ ಸೆಕ್ಷನ್ 132, 351, 356(1), 61(2), 352 ರಡಿ ಎಫ್ಐಆರ್ ದಾಖಲಿಸಿರುವ ಉರ್ವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.