ಮಂಗಳೂರು (ದಕ್ಷಿಣ ಕನ್ನಡ) : ಮಂಗಳೂರು ನಗರ ಹೊರವಲಯದ ಕುಡುಪು ಸಮೀಪ ರವಿವಾರ ಸಂಜೆ ಉತ್ತರ ಭಾರತ ಮೂಲದ ವಲಸೆ ಕಾರ್ಮಿಕನೊಬ್ಬನ ಶವ ಪತ್ತೆಯಾಗಿದ್ದು, ಆತನನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಕೃತ್ಯ ನಡೆದು 24 ಗಂಟೆ ಕಳೆದರೂ ಕೂಡ ಪೊಲೀಸರು ಘಟನೆಯನ್ನು ಲಘುವಾಗಿ ಪರಿಗಣಿಸಿ ಪ್ರಾಥಮಿಕ ಮಾಹಿತಿಯನ್ನು ನೀಡಲು ಮೀನಮೇಷ ಎಣಿಸಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬಂದಿವೆ.
ರವಿವಾರ ಹಾಡಹಗಲೇ ಈ ಕೃತ್ಯ ನಡೆದಿದ್ದರೂ ಕೂಡ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಂಘಪರಿವಾರದ ಒತ್ತಡಕ್ಕೆ ಮಣಿದು ಪೊಲೀಸ್ ಇಲಾಖೆಯು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆಕ್ಷೇಪವೂ ವ್ಯಕ್ತವಾಗಿದೆ.