ಮಂಗಳೂರು (ದಕ್ಷಿಣ ಕನ್ನಡ): ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್ ಮಂಗಳೂರು ನಗರ ಸಮಿತಿ ವತಿಯಿಂದ ಇತ್ತೀಚೆಗೆ ಹತ್ಯೆಯಾದ ರಿಕ್ಷಾ ಚಾಲಕ ಮೊಹಮ್ಮದ್ ಶರೀಫ್ ರನ್ನು ಕೊಲೆಗೈದ ಎಲ್ಲಾ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮತ್ತು ಆಟೋ ಚಾಲಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಮಿನಿ ವಿಧಾನಸಭಾ ಎದುರು ಇಂದು ಪ್ರತಿಭಟನೆ ನಡೆಸಲಾಯಿತು.
ಸಭೆಯನ್ನು ಉದ್ದೇಶಿಸಿ ಯೂನಿಯನ್ ನಾಯಕರು ಮಾತನಾಡಿದರು. ಬಳಿಕ ಮೊಹಮ್ಮದ್ ಶರೀಫ್ ಕುಟುಂಬಕ್ಕೆ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.