ಮಂಗಳೂರು: ಮಂಗಳೂರಲ್ಲಿ ಕೆಲ ವರ್ಷಗಳ ಹಿಂದೆ ನಡೆದಿದ್ದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿದೆ.
ಸಮೀರ್ ರವಿವಾರ ರಾತ್ರಿ ತನ್ನ ಕುಟುಂಬದೊಂದಿಗೆ ಕಲ್ಲಾಪು ಬಳಿಯ ಫಾಸ್ಟ್ ಫುಡ್ ಅಂಗಡಿಯೊಂದಕ್ಕೆ ಬಂದಿದ್ದು, ಕೊಲೆಗಾಗಿ ಹೊಂಚು ಹಾಕಿದ್ದ ದುಷ್ಕರ್ಮಿಗಳ ತಂಡ ಈತನ ವಾಹನವನ್ನೇ ಹಿಂಬಾಲಿಸಿಕೊಂಡು ಬಂದು ಕೊಲೆ ಕೃತ್ಯವೆಸಗಿದೆ.
ಘಟನೆಯ ಬಳಿಕ ಕಿರಾತಕರ ತಂಡ ಪರಾರಿಯಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ. ಸುಮಾರು 3-4 ಮಂದಿ ಅಪರಿಚಿತ ದುಷ್ಕರ್ಮಿಗಳು ತಲವಾರು, ಮಾರಕಾಯುಧಗಳಿಂದ ಹಲ್ಲೆ ನಡೆಸಿ ಸಮೀರ್ ನನ್ನು ಕೊಲೆ ಮಾಡಲಾಗಿದೆ.