ಮಂಗಳೂರು (ದಕ್ಷಿಣ ಕನ್ನಡ): 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಇಕ್ಬಾಲ್ @ಪ್ರವೀಣ್ ಕುಮಾರ್ ತೊಮರ್, ಬಂಧಿತ ಆರೋಪಿ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ,ಕ್ರ 15/2008 ಕಲಂ 416, 420, 511 ಜೊತೆಗೆ 34 Ipc ಪ್ರಕರಣದಲ್ಲಿ ಈ ಆರೋಪಿ ಸುಮಾರು 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ತೆಲಂಗಾಣ ರಾಜ್ಯದ ಹೈದ್ರಾಬಾದ್ ನಲ್ಲಿ ಪತ್ತೆ ಹಚ್ಚಿ ದಿನಾಂಕ 28-09-2024 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.