ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ದಕ್ಷಿಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೇ ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿ ಅಭಿಜಿತ್ ಯಾನೆ ಅಭಿ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.