ಮಂಗಳೂರು (ದಕ್ಷಿಣ ಕನ್ನಡ): ಎರಡು ಕಾರುಗಳ ನಡುವೆ ಅಪಘಾತ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮದ್ದಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿಂದು ನಡೆದಿದೆ.
ಗುರುವಾಯನಕೆರೆ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರೊಂದು ಪೆಟ್ರೋಲ್ ಪಂಪ್ ಕಡೆಗೆ ಟರ್ನ್ ಮಾಡಿ ಹೋಗ್ತಿದ್ದಾಗ ಇದೇ ವೇಳೆ ಅದೇ ರಸ್ತೆಯಲ್ಲಿ ಅತೀ ವೇಗದಿಂದ ಬಂದ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದರಿಂದ ಕ್ವಿಡ್ ಕಾರು ಪಲ್ಟಿಯಾಗಿದೆ.
ಘಟನೆಯಿಂದ ಕ್ವಿಡ್ ಕಾರಿನಲ್ಲಿದ್ದವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.