Saturday, July 12, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು: ಎಂಆರ್‌ಪಿಎಲ್‌ನ ಶೇಖರಣಾ ಘಟಕದಲ್ಲಿ ಗ್ಯಾಸು ಸೋರಿಕೆಯಿಂದ ಇಬ್ಬರ ಸಾವು

ಮಂಗಳೂರು: ಎಂಆರ್‌ಪಿಎಲ್‌ನ ಶೇಖರಣಾ ಘಟಕದಲ್ಲಿ ಗ್ಯಾಸು ಸೋರಿಕೆಯಿಂದ ಇಬ್ಬರ ಸಾವು

ಮಂಗಳೂರು (ದಕ್ಷಿಣ ಕನ್ನಡ): ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ನಡೆದಿದೆ. ಮೃತರನ್ನು ತಾಂತ್ರಿಕ ಸಹಾಯಕರಾದ ಬಿಜಿಲ್‌ ಪ್ರಸಾದ್‌ ಹಾಗೂ ದೀಪ್‌ ಚಂದ್ರ ಭರ್‌ ಎಂದು ಗುರುತಿಸಲಾಗಿದೆ. ಮತ್ತೋರ್ವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಗಂಭೀರವಾಗಿದ್ದು, ಅವರನ್ನು ನಗರದ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಮೂವರೂ OM‌‌‌‌&S ಘಟಕದ ಶೇಖರಣಾ ಪ್ರದೇಶದ ನಿರ್ವಹಣೆ ಕಾರ್ಮಿಕಾರಾಗಿದ್ದರು ಎಂದು ತಿಳಿದು ಬಂದಿದೆ.
MRPL ನಲ್ಲಿ ಇಂದು ದುರಂತ ನಡೆದ ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಪರವಾಗಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಭೇಟಿ‌ ನೀಡಿ ಪರಿಶೀಲಿಸಿದರು.

ಬಳಿಕ‌ MRPL MD ಯವರೊಂದಿಗೂ ಚರ್ಚಿಸಿದ್ದು, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಸೂಚಿಸಿದ್ದಾರೆ. ಸಾವನ್ನಪ್ಪಿದ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಮತ್ತು ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಸುರತ್ಕಲ್ ಉಪತಹಶೀಲ್ದಾರ್ ನವೀನ್ ಕುಮಾರ್ ಇದ್ದರು.

RELATED ARTICLES
- Advertisment -
Google search engine

Most Popular