ಚಿಂತಾಮಣಿ : ದ್ವಿಚಕ್ರ ವಾಹನದಲ್ಲಿ ಬಂದ ಖದೀಮರು ಒಂಟಿ ಮಹಿಳೆಯ ಚಿನ್ನದ ಮಾಂಗಲ್ಯ ಸರವನ್ನು ಕಿತ್ತು ಎಸ್ಕೇಪ್ ಆದ ಘಟನೆ ನಗರ ಮಾಳಪ್ಪಲ್ಲಿ ಬಡಾವಣೆ ಹತ್ತಿರ ನಡೆದಿದೆ.
ಮಾಳಪ್ಪಲ್ಲಿಯ ಬಳಿ ರಮಾದೇವಿ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಶ್ರೀನಿವಾಸ್‌ಪುರಕ್ಕೆ ಹೋಗುವ ದಾರಿ ಕೇಳಿ ಸ್ವಲ್ಪ ದೂರ ಮುಂದೆ ಹೋಗಿ ನಂತರ ವಾಪಸ್ ಬಂದು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾರೆ. ರಮಾದೇವಿ ಬೆಂಗಳೂರಿನಿಂದ ಬಂದು ರಾಘವೇಂದ್ರ ಸ್ವಾಮಿ ದೇವಸ್ಥಾನದ ಬಳಿ ಬಸ್ ಇಳಿದು ಮನೆಗೆ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆಯೇ, ಎಸ್‌ಪಿ ಕುಶಾಲ್ ಚೌಕ್ಸೆ, ಡಿವೈಎಸ್ಪಿ ಮುರಳಿಧರ್, ನಗರ ಠಾಣೆಯ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯ ನಡೆಸಿ ಶೀಘ್ರವೇ ಕಳ್ಳರನ್ನು ಹಿಡಿಯುವ ಭರವಸೆ ನೀಡಿದ್ದಾರೆ.