ನವದೆಹಲಿ: ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ ೧೫ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಇಂದು ಶನಿವಾರ ಆದೇಶ ಪ್ರಕಟಿಸಿದೆ.
ವಿಶೇಷ ನ್ಯಾಯಾಧೀಶೆ ಕಾವೇರಿ ಬಾವೇಜಾ ಅವರು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು. ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್ ೯ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.