Saturday, April 19, 2025
Google search engine

Homeರಾಜಕೀಯಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ತುದಿಗಾಲಲ್ಲಿ ನಿಂತಿದ್ದಾರೆ : ಶಾಸಕ ವಿನಯ್ ಕುಲಕರ್ಣಿ..!

ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ತುದಿಗಾಲಲ್ಲಿ ನಿಂತಿದ್ದಾರೆ : ಶಾಸಕ ವಿನಯ್ ಕುಲಕರ್ಣಿ..!

ವಿಜಯಪುರ : ಕಾಂಗ್ರೆಸ್​-ಜೆಡಿಎಸ್​ ಸಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿದ್ದ 17 ಜನ ಶಾಸಕರು ಮತ್ತೆ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮಾತನಾಡಿ ಬಿಜೆಪಿಯಲ್ಲಿನ ಹಲವು ನಾಯಕರು ಬೇಜಾರಿನಲ್ಲಿ ಇರುವುದು ನಿಜ. 13 ರಿಂದ 14 ಬಿಜೆಪಿ ಮಾಜಿ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಹೇಳಿದ್ದಾರೆ.

ಹಾಲಿ ಶಾಸಕರ ಜೊತೆಗೆ, ಕೆಲ ಮಾಜಿ ಶಾಸಕರು ಅಸಮಧಾನಗೊಂಡಿದ್ದಾರೆ. ಹಲವು ನಾಯಕರು ಈಗ್ಲೂ ಕಾಂಗ್ರೆಸ್​​ ಸಂಪರ್ಕದಲ್ಲಿದ್ದಾರೆ. ಮಾಜಿ ಶಾಸಕರು, ಮುಖಂಡರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಮೆಚ್ಚಿಕೊಂಡು ಹಲವರು ಬರುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ವಿಜಯಪುರದಲ್ಲಿ ಶಾಸಕ ವಿನಯ್ ಕುಲಕರ್ಣಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಾಂಗ್ರೆಸ್​ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಶಂಕರ ಪಾಟೀಲ್ ಮುನೇನಕೊಪ್ಪ ತುಂಬಾ ಅನುಭವಸ್ಥರು, ಮುನೇನಕೊಪ್ಪ ಅವರಿಗೆ ರಾಜಕೀಯದಲ್ಲಿ ಅನುಭವ ಇದೆ. ಪಕ್ಷಕ್ಕೆ ಬಲ ತುಂಬವರು ಪಕ್ಷಕ್ಕೆ ಬಂದ್ರೇ ಸೇರಿಸಿಕೊಳ್ಳುತ್ತೇವೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular