ಹನೂರು: ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಇಗ್ನೇಶಿ ಮುತ್ತು ಮತ್ತು ಉಪಾಧ್ಯಕ್ಷರಾಗಿ ನದಿಯಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಹನೂರು ತಾಲೂಕಿನ ದೊಡ್ಡ ಗ್ರಾಮ ಪಂಚಾಯಿತಿಯಂದೇ ಹೆಸರು ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ 38 ಸದಸ್ಯ ಬಲವಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯರು 20 ಜೆಡಿಎಸ್ ಬೆಂಬಲಿತ ಸದಸ್ಯರು 14 ಬಿಜೆಪಿ ಬೆಂಬಲಿತ ಸದಸ್ಯರು 2 ಪಕ್ಷೇತರ ಸದಸ್ಯರು 2 ಆಯ್ಕೆಯಾಗಿದ್ದಾರೆ.
ಗುರುವಾರ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಇಗ್ನೇಶಿ ಮತ್ತು ಜೆಡಿಎಸ್ ಬೆಂಬಲಿತ ಸದಸ್ಯೆ ಮೇರಿ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ನದಿಯಾ ಜೆಡಿಎಸ್ ಬೆಂಬಲಿತ ಸದಸ್ಯ ಕಾವ್ಯ ನಾಮಪತ್ರ ಸಲ್ಲಿಸಿದ್ದರು.
ಅಂತಿಮವಾಗಿ ಚುನಾವಣೆಯಲ್ಲಿ 26 ಮತ ಪಡೆದ ಇಗ್ನೇಶಿ ಮುತ್ತು ಅಧ್ಯಕ್ಷರಾಗಿ 29 ಮತ ಪಡೆದ ನದಿಯಾ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಮೊದಲ ಅವಧಿಯಲ್ಲಿಯೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು ಎಂದು ಸಹ ಕಾಂಗ್ರೆಸ್ ಸದಸ್ಯರೇ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂತಸವನ್ನುಂಟು ಮಾಡಿದೆ.
ಗ್ರಾಪಂ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಇಗ್ನೇಶಿ ಮುತ್ತು ಮಾತನಾಡಿ ನಮ್ಮ ಗ್ರಾಮ ಪಂಚಾಯಿತಿಯು ತಾಲೂಕಿನಲ್ಲಿ ಅತಿ ದೊಡ್ಡ ಗ್ರಾಮ ಪಂಚಾಯಿತಿ ಯಾಗಿದೆ. ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಕುಡಿಯುವ ನೀರು, ಚರಂಡಿ, ರಸ್ತೆ, ಸೇರಿದಂತೆ ಇನ್ನಿತರ ಸರ್ಕಾರದ ಸೌಲಭ್ಯಗಳನ್ನು ಪ್ರತಿಯೊಬ್ಬರಿಗೆ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಮುಖಂಡರುಗಳಾದ ಶಿವು, ಎನ್ ಆರ್ ಮಾದೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರುಗಳು ಹಾಜರಿದ್ದರು.
ವಿವಿಧ ಗ್ರಾಮ ಪಂಚಾಯಿತಿ ಗಳಿಗೆ ಅಧ್ಯಕ್ಷರು ಉಪಾಧ್ಯಕ್ಷರಾಗಿ ಆಯ್ಕೆ: ಕಣ್ಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಭಾಗ್ಯಮ್ಮ, ಉಪಾಧ್ಯಕ್ಷರಾಗಿ ಜ್ಯೋತಿ, ಮಣಗಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಸದಸ್ಯ ಸೋಮಶೇಖರ್, ಉಪಾಧ್ಯಕ್ಷರಾಗಿ ಚಿಕ್ಕ ವೆಂಕಟಮ್ಮ ಕೌದಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರೇವತಿ ಉಪಾಧ್ಯಕ್ಷರಾಗಿ ಮುತ್ತುಲಕ್ಷ್ಮಿ, ಹುತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರೇಖಾ , ಉಪಾಧ್ಯಕ್ಷರಾಗಿ ಅಶ್ವಥ್ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮುತ್ತುರಾಜು, ಉಪಾಧ್ಯಕ್ಷರಾಗಿ ಬೇಬಿ ಲೊಕ್ಕನಹಳ್ಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಾಗೇಶ್ ,ಉಪಾಧ್ಯಕ್ಷರಾಗಿ ನಂದಿನಿ ಆಯ್ಕೆಯಾಗಿದ್ದಾರೆ. ಈ ವೇಳೆ ಪಿಡಿಒ ಗಳಾದ ಗಂಗಾಧರ್, ಸುರೇಶ್ ,ನಂದೀಶ್, ಮರಿಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.