ಮಂಡ್ಯ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನಲೆ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮವನ್ನು ಮದ್ದೂರು ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೃಹತ್ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮ ಆಯೋಜಿಸಿದ್ದು, ತಹಶೀಲ್ದಾರ್ ನರಸಿಂಹಮೂರ್ತಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಭಾರತ ಸಂವಿಧಾನದ ಪೀಠಿಕೆ ಅನಾವರಣ ಮಾಡಿ, ಪೀಠಿಕೆ ಬೋಧಿಸಿದರು.
ಕಾರ್ಯಕ್ರಮದಲ್ಲಿ ಬಿಇಓ ಕಾಳಿರಯ್ಯ, ಸಮಾಜ ಕಲ್ಯಾಣ ಅಧಿಕಾರಿ ನಾಗಲಕ್ಷ್ಮಿ ಬಾಯಿ, ಮಹಿಳಾ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ನಾರಾಯಣ ಸೇರಿದಂತೆ ಹಲವರು ಭಾಗಿಯಾಗಿದ್ದರು.