ಮಂಗಳೂರು (ದಕ್ಷಿಣ ಕನ್ನಡ): ಉಡುಪಿ- ಕಾಸರಗೋಡು 400 ಕೆವಿ ಮತ್ತು ಪಾಲಡ್ಕ- ಕಡಂದಲೆ 400/220 ಕೆವಿ ವಿದ್ಯುತ್ ಪ್ರಸರಣ ಮಾರ್ಗವನ್ನು ವಿರೋಧಿಸಿ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಂಗಳೂರಲ್ಲಿ ಇಂದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು.
ನಗರದ ಬಲ್ಮಠದ ಸಿಎಸ್ ಐ ಮೈದಾನದಿಂದ ಕ್ಲಾಕ್ ಟವರ್ ತನಕ ನಡೆದ ಪ್ರತಿಭಟನಾ ರ್ಯಾಲಿಗೆ ಮಂಗಳೂರು ಕೆಥೊಲಿಕ್ ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕ ಅಧಿಕಾರಿ ಫಾ.ಜೆ.ಬಿ.ಸಲ್ದಾನ ಪ್ರತಿಭಟನಾಕಾರರಿಗೆ ಹಸಿರು ಧ್ವಜವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.