Saturday, September 13, 2025
Google search engine

Homeರಾಜ್ಯಸುದ್ದಿಜಾಲದೊಡ್ಡಸ್ವಾಮೇಗೌಡರ 75ನೇ ಹುಟ್ಟುಹಬ್ಬದ ಅಂಗವಾಗಿ ಕೆ.ಆರ್.ನಗರದಲ್ಲಿ ಬೃಹತ್ ಸಮಾಜಮುಖಿ ಕಾರ್ಯಕ್ರಮಗಳು

ದೊಡ್ಡಸ್ವಾಮೇಗೌಡರ 75ನೇ ಹುಟ್ಟುಹಬ್ಬದ ಅಂಗವಾಗಿ ಕೆ.ಆರ್.ನಗರದಲ್ಲಿ ಬೃಹತ್ ಸಮಾಜಮುಖಿ ಕಾರ್ಯಕ್ರಮಗಳು

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ದೊಡ್ಡಸ್ವಾಮೇಗೌಡರ ೭೫ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಕಾಂಗ್ರೆಸ್ ಮತ್ತು ಅವರ ಅಭಿಮಾನಿ ಬಳಗದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಡ್ಯಮಹದೇವಸ್ವಾಮಿ ಹೇಳಿದರು.

ಪಟ್ಟಣದ ಮುಳ್ಳೂರು ರಸ್ತೆಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ದೊಡ್ಡಸ್ವಾಮೇಗೌಡರ ಹುಟ್ಟು ಹಬ್ಬದ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅ.೧೨ರಂದು ಅದ್ದೂರಿ ಮತ್ತು ಸಮಾಜಸೇವಾ ಕಾರ್ಯಗಳೊಂದಿಗೆ ಆಚರಣೆ ಮಾಡಲಾಗುತ್ತದೆ ಎಂದರು.

ಕಳೆದ ೨೫ ವರ್ಷಗಳಿಂದ ಸಹಕಾರ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಮಡು ಸಮಾಜಮುಖಿ ಕೆಲಸ ಮಾಡುತ್ತಾ ಬಂದಿರುವ ದೊಡ್ಡಸ್ವಾಮೇಗೌಡರ ೭೫ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಅ.೧೨ರಂದು ಪಟ್ಟಣದ ಪುರಸಭೆ ಬಯಲು ರಂಗ ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಕ್ತದಾನ ಶಿಬಿರ, ಬೃಹತ್ ಉದ್ಯೋಗ ಮೇಳ ಮತ್ತು ಉಚಿತ ಆರೋಗ್ಯ ತಪಾಷಣಾ ಶಿಬಿರವನ್ನು ಏರ್ಪಡಿಸಲಾಗುವುದು. ಕ್ಷೇತ್ರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಹುಟ್ಟು ಹಬ್ಬದ ಅಂಗವಾಗಿ ಕ್ಷೇತ್ರದ ಜನತೆಯ ಅನುಕೂಲಕ್ಕಾಗಿ ಮೂರು ತುರ್ತುವಾಹನಗಳು ಮತ್ತು ಒಂದು ಮುಕ್ತಿರಥವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುತ್ತದೆ ಮಾಹಿತಿ ನೀಡಿದ ಮಾಜಿ ಅಧ್ಯಕ್ಷರು ಶಾಸಕ ಡಿ.ರವಿಶಂಕರ್ ಮತ್ತು ದೊಡ್ಡಸ್ವಾಮೇಗೌಡರ ನಿರ್ದೇಶನದಂತೆ ಕ್ಷೇತ್ರದ ಜನತೆಯ ಉಪಯೋಗಕ್ಕಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆಂದರು.

ಜಿ.ಪಂ. ಮಾಜಿ ಅಧ್ಯಕ್ಷ ಸಿದ್ದಪ್ಪ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ರಾಜ್ಯ ಎಸ್‌ಟಿ ಘಟಕದ ಉಪಾಧ್ಯಕ್ಷ ಜೆ.ಶ್ರೀನಿವಾಸ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ಕೆಂಚಿಮAಜು, ವಕ್ತಾರ ಸೈಯದ್‌ಜಾಬೀರ್, ತಾ.ಪಂ. ಮಾಜಿ ಅಧ್ಯಕ್ಷರಾದ ಹೆಚ್.ಟಿ.ಮಂಜುನಾಥ್, ಎಸ್.ಬಿ.ಚಂದ್ರಶೇಖರ್, ಎಂ.ಹೆಚ್.ಸ್ವಾಮಿ, ಮಾಜಿ ಸದಸ್ಯ ಎ.ಟಿ.ಗೋವಿಂದೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಬಿ.ನಟರಾಜು, ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕ ಕೆ.ಎನ್.ಪ್ರಸನ್ನಕುಮಾರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಹೆಚ್.ಹೆಚ್.ನಾಗೇಂದ್ರ, ಟಿಎಪಿಸಿಎಂಎಸ್‌ನ ಮಾಜಿ ಅಧ್ಯಕ್ಷ ಎಸ್.ಸಿದ್ದೇಗೌಡ, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ಮುಖಂಡರಾದ ಜಿ.ಎಸ್.ವೆಂಕಟೇಶ್, ಪುಟ್ಟು, ಎಲ್.ಪಿ.ರವಿಕುಮಾರ್, ಸತೀಶ್ ಹಾಜರಿದ್ದರು.

RELATED ARTICLES
- Advertisment -
Google search engine

Most Popular