Saturday, April 19, 2025
Google search engine

Homeರಾಜ್ಯಸುದ್ದಿಜಾಲಧಾರವಾಡದಲ್ಲಿ ಅಚ್ಚುಕಟ್ಟಾಗಿ ನಡೆಸಿದ ಮಾಸ್ಟರಿಂಗ್ ಕೆಲಸ: ಸಿಬ್ಬಂದಿಗೆ ಪ್ರೋತ್ಸಾಹ ನೀಡಿದ ಜಿಲ್ಲಾಧಿಕಾರಿ

ಧಾರವಾಡದಲ್ಲಿ ಅಚ್ಚುಕಟ್ಟಾಗಿ ನಡೆಸಿದ ಮಾಸ್ಟರಿಂಗ್ ಕೆಲಸ: ಸಿಬ್ಬಂದಿಗೆ ಪ್ರೋತ್ಸಾಹ ನೀಡಿದ ಜಿಲ್ಲಾಧಿಕಾರಿ

ಧಾರವಾಡ : ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗೆ ಮತಯಂತ್ರ ಹಾಗೂ ಚುನಾವಣಾ ಸಾಮಗ್ರಿಗಳನ್ನು ವಿತರಿಸುವ ಮುಖ್ಯ ವೇದಿಕೆಯಾದ ಧಾರವಾಡದ ಆರ್. ಎಲ್.ಎಸ್.ಪದವಿಪೂರ್ವ ಕಾಲೇಜು ಹಾಗೂ ಬಾಸೆಲ್ ಮಿಷನ್ ಆಂಗ್ಲ ಮಾಧ್ಯಮ ಶಾಲೆಗಳ ಆವರಣವನ್ನು ಸೋಮವಾರ ಅಚ್ಚುಕಟ್ಟಾಗಿ ಮಾಡಲಾಗಿತ್ತು.

ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ನಡೆಯುತ್ತಿರುವ ಕಾಲೇಜು ಆವರಣಕ್ಕೆ ಬೆಳಗ್ಗೆಯೇ ಆಗಮಿಸಿದ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು ಚುನಾವಣಾ ಸಾಮಗ್ರಿಗಳನ್ನು ಜೋಡಿಸಲು ಕೊಠಡಿಗಳಲ್ಲಿ ಸಿಬ್ಬಂದಿಗೆ ಅವಕಾಶ ಮಾಡಿಕೊಟ್ಟು ಮಸ್ಟರಿಂಗ್ ಕಾರ್ಯದ ಸಮಗ್ರ ವಿವರ ಪಡೆದರು. ಈ ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಮತಗಟ್ಟೆ ಅಧಿಕಾರಿ, ಸಿಬ್ಬಂದಿಯೊಂದಿಗೆ ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಪ್ರಾಮಾಣಿಕವಾಗಿ, ನೈತಿಕ ಸ್ಥೈರ್ಯದಿಂದ ಮಾತನಾಡಿದರು. ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮತಗಟ್ಟೆ ಸಹಾಯಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಬೆಳಗ್ಗೆ 06 ಗಂಟೆಯಿಂದ ಧಾರವಾಡದ ಆರ್. ಎಲ್.ಎಸ್.ಪದವಿ ಕಾಲೇಜು ಹಾಗೂ ಬಾಸೆಲ್ ಮಿಷನ್ ಆಂಗ್ಲ ಮಾಧ್ಯಮಿಕ ಶಾಲೆ ಆವರಣದಲ್ಲಿ ಹಬ್ಬದ ಸಂಭ್ರಮ ಕಂಡು ಬಂತು. ಬೆಳಗ್ಗೆ 8 ಗಂಟೆ ವೇಳೆಗೆ ಮತಗಟ್ಟೆಗಳಿಗೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ಕಾಲೇಜು ಆವರಣದಲ್ಲಿ ಜಮಾಯಿಸಿದರು.

ಇದರೊಂದಿಗೆ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರು, ಮತಗಟ್ಟೆ ವ್ಯವಸ್ಥೆ ಕೂಡ ಆಗಮಿಸಿದ್ದರು. ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸರನ್ನು ಕರೆದೊಯ್ಯಲು ಕಾಲೇಜು ಆವರಣದಲ್ಲಿ ಬಸ್, ಜೀಪುಗಳು ಸಾಲುಗಟ್ಟಿ ನಿಂತಿದ್ದವು. ಕಾಲೇಜು ಆವರಣದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮತಗಟ್ಟೆ ವಿವರ ಹಾಗೂ ಬಸ್‌ಗಳ ಕುರಿತು ಧ್ವನಿಮುದ್ರಿಕೆ ಮೂಲಕ ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಮತ್ತೊಂದೆಡೆ ಚುನಾವಣಾ ಪರಿಕರಗಳು, ಇವಿಎಂ ಯಂತ್ರಗಳ ಬಾಕ್ಸ್, ವಿವಿ ಪ್ಯಾಟ್ ಮಷಿನ್ ಬಾಕ್ಸ್ ಮತ್ತು ಮತದಾನ ಠಾಣಾಧಿಕಾರಿ, ಸಿಬ್ಬಂದಿಗೆ ವಿಶೇಷ ಕಿಟ್ ಬ್ಯಾಗ್ ವಿತರಿಸಲು ಸೆಕ್ಟರ್ ವಾರ್ ರೂಂಗಳನ್ನು ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಚುನಾವಣಾ ಸಿಬ್ಬಂದಿಗೆ ಚುನಾವಣಾ ಸಾಮಗ್ರಿಗಳನ್ನು ವಿತರಿಸುವ ಪ್ರಕ್ರಿಯೆ ನಡೆಯಿತು. ಮಸ್ಟರಿಂಗ್ ಕಾರ್ಯಾಚರಣೆಗೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿಲ್ಲ.

ಧಾರವಾಡದಲ್ಲಿ ಆಯೋಜಿಸಿದ್ದ ಮಾಸ್ಟರಿಂಗ್ ಕಾರ್ಯವನ್ನು ಯಾವುದೇ ಗೊಂದಲವಿಲ್ಲದೆ ನಿರ್ವಹಿಸಲು ಮುಂಜಾಗ್ರತಾ ಯೋಜನೆಯಾಗಿ ಯಶಸ್ವಿಯಾಗಿ ಯೋಜಿಸಿ ಅನುಷ್ಠಾನಗೊಳಿಸಲಾಯಿತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ತಹಸೀಲ್ದಾರ್ ದೊಡ್ಡಪ್ಪ ಹೂಗಾರ ಇತರರು ಇದ್ದರು.

RELATED ARTICLES
- Advertisment -
Google search engine

Most Popular