Friday, April 18, 2025
Google search engine

Homeರಾಜ್ಯಸುದ್ದಿಜಾಲಗಣಿತ ಕಲಿಕಾ ಆಂದೋಲನ: ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕಿರಣ

ಗಣಿತ ಕಲಿಕಾ ಆಂದೋಲನ: ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕಿರಣ

ಮಡಿಕೇರಿ : ಕರ್ನಾಟಕ ಸರಕಾರ, ಶಿಕ್ಷಣ ಇಲಾಖೆ ಹಾಗೂ ಅಕ್ಷರ ಫೌಂಡೇಶನ್ ಸಹಯೋಗದೊಂದಿಗೆ ಗಣಿತ ಕಲಿಕಾ ಆಂದೋಲನ ಯೋಜನೆಯು ಸುಮಾರು ವರ್ಷಗಳಿಂದ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳ ಗುಣಾತ್ಮಕ ಕಲಿಕೆಗಾಗಿ ಹಾಗೂ ಮಕ್ಕಳು ಗಣಿತ ವಿಷಯವನ್ನು ಸರಳವಾಗಿ, ಅನುಭವಾತ್ಮಕವಾಗಿ ಕಲಿಯಲು ಜಿಲ್ಲೆಯ ಪ್ರತಿ ಶಾಲೆಗಳಿಗೆ ಗಣಿತ ಕಿಟ್ ನೀಡುವುದರ ಮೂಲಕ ಅನುಷ್ಠಾನಗೊಂಡಿರುತ್ತದೆ.

ಈ ಯೋಜನೆ ಅಡಿಯಲ್ಲಿ ಕೊಡಗು ಜಿಲ್ಲೆಯ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ಸಮುದಾಯ, ಶೈಕ್ಷಣಿಕ ಸ್ವಯಂ ಸೇವಕರು, ಗ್ರಾಮ ಪಂಚಾಯತ್ ಮಟ್ಟದ ಶೈಕ್ಷಣಿಕ ತಂಡದ ನಾಯಕರು ಹಾಗೂ ಅಕ್ಷರ ಫೌಂಡೇಶನ್ ಸಹಭಾಗಿತ್ವದಲ್ಲಿ “ಗ್ರಾಮ ಪಂಚಾಯಿತಿ ಮಟ್ಟದ ಗಣಿತ ಸ್ಪರ್ಧೆಗಳನ್ನು 4ನೇ ತರಗತಿ ಯಿಂದ 6ನೇ ತರಗತಿಯ ಮಕ್ಕಳಿಗೆ ಒಟ್ಟು 102 ಗ್ರಾಮ ಪಂಚಾಯತಿಗಳಲ್ಲಿ ಮಾಡಲಾಯಿತು. ಸುಮಾರು 7600 ಮಕ್ಕಳು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ.

ಗ್ರಾಮ ಪಂಚಾಯತಿ ಮಟ್ಟದ ಗಣಿತ ಸ್ಪರ್ಧೆಗಳು ಎಲ್ಲರ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ಯಶಸ್ಸು ಸಾಧಿಸಿದೆ. ಅಕ್ಷರ ಫೌಂಡೇಶನ್ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಇಲಾಖೆಯ ಸಹಕಾರದೊಂದಿಗೆ ಸಕ್ರೀಯವಾಗಿ ತೊಡಗಿಸಿಕೊಂಡಿರುವುದು 2024-25ನೇ ವರ್ಷಕ್ಕೆ 25 ವರ್ಷಗಳು ಪೂರೈಸಲಿದೆ. ಹೀಗಾಗಿ ಶಿಕ್ಷಣ ಇಲಾಖೆಗೆ ಮತ್ತು ಗ್ರಾಮ ಪಂಚಾಯತ್ ಇಲಾಖೆಗೆ ಅಭಿನಂದಿಸುವ ಉದ್ದೇಶದಿಂದ ಗ್ರಾಮ ಪಂಚಾಯತ್ ಮಟ್ಟದ ಗಣಿತ ಸ್ಪರ್ಧೆಗಳ ಮಕ್ಕಳ ಫಲಿತಾಂಶದ ಆಧಾರದ ಮೇಲೆ ಜಿಲ್ಲೆಯ 25 ಶಾಲೆಗಳನ್ನು ಹಾಗೂ 25 ಗ್ರಾಮ ಪಂಚಾಯತ್ ಗಳನ್ನು ಗುರುತಿಸಿ “ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕಿರಣ” ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ/ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ/ ಉಪ ನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ಅವರ ಉಪಸ್ಥಿತಿಯಲ್ಲಿ ಸರಕಾರಿ ಕಿರಿಯ/ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಾಯರವರಿಗೆ ಮತ್ತು ಮಾನ್ಯ ಗ್ರಾಮ ಪಂಚಾಯತ ಅಧ್ಯಕ್ಷರು/ಪಿ.ಡಿ.ಒ ಅವರಿಗೆ ಸನ್ಮಾನಿಸಲಾಗುವುದು ಹಾಗೂ ಗ್ರಾಮ ಪಂಚಾಯತ್ ಮಟ್ಟದ ಗಣಿತ ಸ್ಪರ್ಧೆಗಳ ಜಿಲ್ಲಾ ವರದಿಯನ್ನು ಬಿಡುಗಡೆಗೊಳಿಸಲಾಗುವುದು.

ಜಿಲ್ಲಾ ವರದಿಗಳನ್ನು ಜಿಲ್ಲಾಧಿಕಾರಿಗಳಿಗೆ, ಮುಖ್ಯ ಕಾರ್ಯನಿರ್ವಾಕ ಅಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ಶಿಕ್ಷಣ ಇಲಾಖೆ ಇವರಿಗೆ ಒದಗಿಸಲಾಗುವುದು. ಅದೇ ರೀತಿಯಲ್ಲಿ ತಾಲೂಕು ಹಂತದ ಇಲಾಖೆಗಳ ಅಧಿಕಾರಿಗಳಿಗೆ, ಗ್ರಾಮ ಪಂಚಾಯತ್ ಮತ್ತು ಪ್ರತಿ ಶಾಲೆಗಳಿಗೆ ಗಣಿತ ಸ್ಪರ್ಧೆಯ ವರದಿಯನ್ನು ಕೊಡಲಾಗುವುದು. ಈ ವರದಿಗಳಲ್ಲಿ ಮಕ್ಕಳ ಗಣಿತ ಕಲಿಕಾ ಸಾಮಾಥ್ರ್ಯದ ಫಲಿತಾಂಶ ವನ್ನು ಒಳಗೊಂಡಿರುವುದರಿಂದ ಎಲ್ಲಾ ಅಧಿಕಾರಿಗಳು ವರದಿಗಳನ್ನು ಗಮನ ಹರಿಸಿ ಆನ್‍ಲೈನ್ ಅಥವಾ ಆಫ್‍ಲೈನ್ ಸಭೆಗಳಲ್ಲಿ, ತರಬೇತಿಗಳಲ್ಲಿ, ಕಾರ್ಯಗಾರಗಳಲ್ಲಿ ಇದರ ಬಗ್ಗೆ ಚರ್ಚಿಸಲು ಸಾದ್ಯವಾಗುತ್ತದೆ.

ಮುಂದಿನ ದಿನಗಳಲ್ಲಿ ಶಾಲಾ ಪರಿಸರವನ್ನು ಹಾಗೂ ಸಮಗ್ರವಾದ ಮಕ್ಕಳ ಕಲಿಕಾ ಬೆಳವಣಿಗೆಗಾಗಿ ಶೈಕ್ಷಣಿಕ ಕ್ರೀಯಾ ಯೋಜನೆಯಲ್ಲಿ ಅಳವಡಿಸಿಕೊಳ್ಳಲು ಸಹಾಯವಾಗುತ್ತದೆ. ಬಹುಮುಖ್ಯವಾಗಿ ಶಾಲಾ ವರದಿಯು ಮಕ್ಕಳ ಕಲಿಕಾ ಮಟ್ಟವನ್ನು ಉತ್ತಮ ಪಡಿಸಲು ಗಣಿತ ಬೋಧಿಸುವ ಶಿಕ್ಷಕರಿಗೆ, ಮುಖ್ಯಶಿಕ್ಷಕರಿಗೆ ತುಂಬಾ ಉಪಯುಕ್ತವಾಗುತ್ತದೆ. ಅದೇ ರೀತಿಯಲ್ಲಿ ಗ್ರಾಮ ಪಂಚಾಯತ್ ಮಟ್ಟದ ವರದಿಯನ್ನು ಪಂಚಾಯತ್ ಸಭೆಗಳಲ್ಲಿ ಚರ್ಚಿಸುವುದರ ಮೂಲಕ ಗ್ರಾಮ ಪಂಚಾಯತ್ ಗೆ ಒಳಪಡುವ ಎಲ್ಲಾ ಶಾಲೆಗಳ ಬಗ್ಗೆ, ಮಕ್ಕಳ ಕಲಿಕೆಯ ಬಗ್ಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಪಾಲಕರು, ಪೆÇೀಷಕರು ಕೂಡ ಮಕ್ಕಳನ್ನು ದಿನಾಲು ಶಾಲೆಗೆ ಕಳಿಸುವುದು ಮತ್ತು ಮನೆಯಲ್ಲಿ ಮಕ್ಕಳ ಅಭ್ಯಾಸದ ಬಗ್ಗೆ ಗಮನ ಹರಿಸುವಂತೆ ಸಮುದಾಯ ಜಾಗೃತಿ ಕಾರ್ಯಕ್ರಮಗಳು ಹಾಕಿಕೊಳ್ಳಲು ಸಹಾಯವಾಗುತ್ತದೆ ಎಂದು ಪ್ರಾಸ್ತಾವಿಕ ಭಾಷಣದಲ್ಲಿ ಅಕ್ಷರ ಫೌಂಡೇಶನ್ ವಿಭಾಗೀಯ ವ್ಯವಸ್ಥಾಪಕರಾದ ಅಂಜಲಿನ ಗ್ರೇಗರಿ ಅವರು ಹೇಳಿದರು.

ಶಿಕ್ಷಣ ಇಲಾಖೆಯ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ಸಮುದಾಯದ ಪ್ರತಿನಿಧಿಯವರು ಗಣಿತ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಿದ ಅಧಿಕಾರಿಗಳೊಂದಿಗೆ ಅಕ್ಷರ ಫಂಡೇಶನ್ ರವರು ಸಿದ್ದಪಡಿಸಿದ ಪ್ರಶ್ನಾವಳಿಗಳ ಮೂಲಕ ಜಿಲ್ಲೆಯ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳ ಕಲಿಕಾ ಮಟ್ಟವನ್ನು ಉತ್ತಮ ಪಡಿಸಲು ಕಾರ್ಯಕ್ರಮಗಳೇನು, ಯೋಜನೆಗಳೇನು, ಜವಾಬ್ದಾರಿಗಳೇನು, ಸಲಹೆಗಳು, ಸೂಚನೆಗಳು ಇವೆಲ್ಲಾವುದರ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಳವಡಿಸಿಕೊಳ್ಳುವ ಅಂಶಗಳನ್ನು ಗಣಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಕಂಡುಕೊಳ್ಳಬಹುದಾಗಿದೆ.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗದಾಮಪ್ಪ, ಉಪ ನಿರ್ದೇಶಕರಾದ ಚಂದ್ರಕಾಂತ ಅವರು ಗ್ರಾಮ ಪಂಚಾಯತ್ ಮಟ್ಟದ ಗಣಿತ ಸ್ಪರ್ಧೆಗಳ ಜಿಲ್ಲಾ ವರದಿ ಬಿಡುಗಡೆ ಮಾಡಿದರು.

ಕಾರ್ಯನಿರ್ವಾಹಕ ಅಧಿಕಾರಿ ಅಪ್ಪಣ್ಣ ಅಪಟ್ಟೀರ, ಮಾಯಮುಡಿ ಗ್ರಾ.ಪಂ.ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ಇಡೀ ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಅಧಿಕಾರಿಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಆಯೋಜನೆ ಮಾಡಿದ ಅಕ್ಷರ ಫೌಂಡೇಶನ್ ಜಿಲ್ಲಾ ಸಂಯೋಜಕರಾದ ಕುಮಾರಸ್ವಾಮಿ ಅವರು ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಈ ಸಂದಂರ್ಭದಲ್ಲಿ 25 ಶಾಲೆಯ ಮುಖ್ಯಶಿಕ್ಷಕರು, 25 ಗ್ರಾಮ ಪಂಚಾಯತ್ ಅದ್ಯಕ್ಷರು, ಪಿ.ಡಿ.ಒ, ಇಒ, ಬಿಇಒ, ಬಿಆರ್‍ಸಿ, ಇತರರು ಇದ್ದರು.

RELATED ARTICLES
- Advertisment -
Google search engine

Most Popular