Saturday, April 5, 2025
Google search engine

Homeಅಪರಾಧರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ; ಐವರು ಸ್ಥಳದಲ್ಲೇ ಮೃತ್ಯು

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ; ಐವರು ಸ್ಥಳದಲ್ಲೇ ಮೃತ್ಯು

ಕಲಬುರಗಿ: ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ನಡೆದಿದೆ.

ಮ್ಯಾಕ್ಸಿಕ್ಯಾಬ್‌ನಲ್ಲಿದ್ದ 31 ಜನರ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಮತ್ತು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಮಾಲನ್, ವಾಜೀದ್‌, ಮೆಹಬೂಬ್ ಬೀ, ಮೆಹಬೂಬ್ ಮತ್ತು ಪ್ರಿಯಾಂಕಾ ಎಂದು ಗುರುತಿಸಲಾಗಿದೆ.

ಬಾಗಲಕೋಟೆಯಿಂದ ಕಲಬುರಗಿ ನಗರದ ಖಾಜಾ ಬಂದೇ ನವಾಜ್ ದರ್ಗಾಕ್ಕೆ ಒಂದೇ ಕುಟುಂಬದ 31 ಜನ ಮ್ಯಾಕ್ಸಿಕ್ಯಾಬ್‌ನಲ್ಲಿ ಬರುತ್ತಿದ್ದರು ಎನ್ನಲಾಗಿದೆ.

ವಾಹನದ ಮಿತಿಮೀರಿದ ವೇಗವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular