78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ
ಚಾಮರಾಜನಗರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಹಾಗೂ ರಾಷ್ಟ್ರ ನಾಯಕರಾದ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶೈಲೇಶ್ ಮಾತನಾಡಿ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಚಳುವಳಿಯಲ್ಲಿ ಪಡೆದಿರುವ ಸ್ವಾತಂತ್ರ್ಯದ ಸಂರಕ್ಷಣೆ ,ದೇಶದ ಅಭಿವೃದ್ಧಿ ಹಾಗೂ ಕರ್ತವ್ಯಗಳ ಬಗ್ಗೆ ವಿಶೇಷ ಪಾಲನೆಯ ಜಾಗೃತಿ ಆಗಬೇಕಿದೆ. ದೇಶಪ್ರೇಮಿಗಳ ತ್ಯಾಗ ಬಲಿದಾನವು ನಮ್ಮೆಲ್ಲರಿಗೂ ಆದರ್ಶವಾಗಲಿ ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಸುರೇಶ್ ಎನ್ ಋಗ್ವೇದಿ, ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಅಧ್ಯಕ್ಷರಾದ ಶ್ರೀನಿವಾಸ್ ಗೌಡ, ಕಸಾಪ ಸದಸ್ಯರಾದ ಗುರುಲಿಂಗಮ್ಮ ಪಂಕಜ ,ಕಾರ್ತಿಕೇಯನ್ ಉಪಸ್ಥಿತರಿದ್ದರು.