ಕೋಲಾರ: ಬೆಂಗಳೂರು ಗ್ರಾಮಾಂ ತರ ಜಿಲ್ಲೆ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಎಂವಿಜೆ ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯ ಮಹೇಶ್ ಅವರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ವಿದ್ಯಾರ್ಥಿನಿ ದರ್ಶಿನಿ(24) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ 4-5 ಮಂದಿಯನ್ನು ಬಂಧಿಸುವ ಸಾಧ್ಯತೆ ಇರುವ ಬಗ್ಗೆ ಮೂಲಗಳು ತಿಳಿಸಿವೆ.
ಈ ಸಂಬಂಧ ಆಕೆಯ ಪೋಷಕರು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹಾಗಾಗಿ ಎಂವಿಜೆ ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯ ಮಹೇಶ್ ಅವರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ.
ಆಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಆಗ್ರಹ: ಮೆರಿಟ್‌ಗಳಿಸಿ ಸರ್ಕಾರಿ ಕೋಟಾದಡಿ ಉಚಿತವಾಗಿ ಮೆಡಿಕಲ್ ಸೀಟ್ ಪಡೆದಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಶಾಲಾ ಶಿಕ್ಷಕಿಯೊಬ್ಬರ ಪುತ್ರಿಯೂ ಆಗಿರುವ ದರ್ಶಿನಿ ಸಾವಿಗೆ ಕಾರಣರಾದ ಎಂವಿಜೆ ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಂಬಂಧಿ ಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡಿದ್ದು, ತನಿಖೆ ದಿಕ್ಕು ತಪ್ಪದಂತೆ ಸರ್ಕಾರ ಕ್ರಮವಹಿಸಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಆಗ್ರಹಿಸಿದ್ದಾರೆ.