ಮಂಗಳೂರು: ನಗರದ ಉಳಾಯಿಬೆಟ್ಟು ಗ್ರಾಮದ, ಕುಟಿನ್ಹ ಪದವು, ಫೆರ್ಮಾಯ್ ಚರ್ಚ್ ಬಳಿಯ ನಿವಾಸಿ ಮನೋಹರ್ ಪಿರೇರಾ ಅವರು ಡಿಸೆಂಬರ್ 17 ರಂದು ರಂದು ಆತ್ಮ ಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಾರಣ ಎಂದು ಹೇಳಿ ತಮ್ಮ ಕೊನೆಯ ವಾಟ್ಸಾಪ್ ವಿಡಿಯೋ ಮಾಡಿ ಹಲವು ವಾಟ್ಸಪ್ಪ್ ಗ್ರೂಪ್ ಗಳಲ್ಲಿ ಹಂಚಿ ಆತ್ಮಹತ್ಯೆಮಾಡಿ ಕೊಂಡಿದ್ದರು.
ತನ್ನ ಸಾಲವನ್ನು ಮರುಪಾವತಿಸಲು ನೀಡಿದ ಹಣವನ್ನು ಸಾಲಕ್ಕೆ ಜಮೆ ಮಾಡದೆ 9 ಲಕ್ಷ ರೂಪಾಯಿ ಯನ್ನು ಅನಿಲ್ ಲೋಬೊ ತಿಂದಿದ್ದಾನೆ ಎಂದು ವಿವರಿಸಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದ್ದು ಡಿ18 ರಂದು ನ್ಯಾಯ ಸಂಹಿತೆ ಸೆಕ್ಷನ್ 108 ಅಡಿಯಲ್ಲಿ ಅನಿಲ್ ಲೋಬೊ ನನ್ನು ಬಂಧಿಸಲಾಗಿತ್ತು.
ಮನೋಹರ್ ಪಿರೇರಾ ಕುಟುಂಬಕ್ಕೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಪರಿಸರದ ನೂರಾರು ಮಂದಿಯ ಸಹಿಯನ್ನೊಳಗೊಂಡ ಮನವಿಯನ್ನು ರಾಜ್ಯದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಮುಖ್ಯಮಂತ್ರಿಗಳು, ಗ್ರಹಸಚಿವರು, ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ರವರಿಗೆ ನೀಡಲಾಗಿತ್ತು. ಮನವಿಗೆ ಸ್ಪಂದಿಸಿದ ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ರವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾoತ್ವನ ಹೇಳಿದ್ದಾರೆ. ನಿಷ್ಪಕ್ಷ ತನಿಖೆಗೆ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿರುತ್ತಾರೆ.
ಎಂಸಿ ಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊನಿಂದ ತೊಂದರೆಗೊಳಗಾ ದ ಇತರ ಗ್ರಾಹಕರು ಸ್ಥಳದಲ್ಲಿ ಹಾಜರಿದ್ದು ತಮ್ಮ ಅಳಲನ್ನು ಯು. ಟಿ. ಖಾದರ್ ಬಳಿ ತೋಡಿಕೊಂಡರು. ಈ ವೇಳೆ ಹಾಜರಿದ್ದ ಸ್ಥಳೀಯರು ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ರವರ ಬಳಿ ದಿವಂಗತ ಮನೋಹರ್ ರವರ ಬದುಕಿನ ಕಷ್ಟಗಳನ್ನು ವಿವರಿಸಿದರು ಹಾಗೂ ಅವರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು