Friday, April 11, 2025
Google search engine

Homeರಾಜ್ಯಕುಡಿಯುವ ನೀರಿನ ಕೊರತೆ ನಿವಾರಣೆಗೆ ಕ್ರಮ : ಸಚಿವ ಖರ್ಗೆ

ಕುಡಿಯುವ ನೀರಿನ ಕೊರತೆ ನಿವಾರಣೆಗೆ ಕ್ರಮ : ಸಚಿವ ಖರ್ಗೆ

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಕೊರತೆಯನ್ನು ಪರಿಹರಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಕಾರಿಗಳ ಖಾತೆಗೆ 1 ಲಕ್ಷ ರೂ. ಠೇವಣಿ ಇಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ವೇಳೆಯಲ್ಲಿ ರಾಯಭಾಗ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಈಗಾಗಲೇ ಎಲ್ಲಾ ಜಿಲ್ಲಾ ಪಂಚಾಯತ್ ಸಿಇಒಗಳಿಗೂ 1 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅದರಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು, ಬೋರ್‍ವೆಲ್ ಸೇರಿದಂತೆ ಇತರ ವ್ಯವಸ್ಥೆಗಳನ್ನು ಕೈಗೊಳ್ಳಬಹುದು. ಒಂದು ವೇಳೆ ಎಲ್ಲಾದರೂ ಸಮಸ್ಯೆಗಳು ಕಂಡುಬಂದರೆ ವೈಯಕ್ತಿಕವಾಗಿ ತಮ್ಮನ್ನು ಭೇಟಿ ಮಾಡಬಹುದು, ತಾವು ಆ ಸಮಸ್ಯೆ ಬಗೆಹರಿಸುವಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಹೊಸ ಗ್ರಾಮ ಪಂಚಾಯಿತಿಗಳ ಸ್ಥಾಪನೆಗೆ ಸದ್ಯಕ್ಕೆ ಅವಕಾಶವಿಲ್ಲ. ಕೇಂದ್ರ ಸಮೀಕ್ಷ ಕೋಶ 2021ರ ಸಮೀಕ್ಷೆಯವರೆಗೂ ಹೊಸ ಗ್ರಾಮ ಪಂಚಾಯಿತಿಗಳಿಗೆ ಅವಕಾಶ ನೀಡಬಾರದು ಎಂದು ಆರ್ಥಿಕ ಇಲಾಖೆಗೆ ಸಲಹೆ ನೀಡಿದೆ.ಜೊತೆಗೆ ಈ ಮೊದಲು ಅಕಾರ ಸ್ವೀಕರಿಸಿರುವ ಗ್ರಾಪಂ ಅಧ್ಯಕ್ಷರ ಮೊದಲನೇ ಅಕಾರವ ಪೂರ್ಣಗೊಂಡಿಲ್ಲ. ಹೀಗಾಗಿ 30 ತಿಂಗಳ ಮೊದಲು ಮಧ್ಯಂತರದಲ್ಲಿ ಹೊಸ ಗ್ರಾ.ಪಂ.ಗಳನ್ನು ನಿರ್ಮಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಚಾಲ್ತಿಯಲ್ಲಿದ್ದ ರಾಷ್ಟ್ರೀಯ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಟೆಂಡರ್‍ಗಳನ್ನು ತಡೆಹಿಡಿದಿರುವುದನ್ನು ಹಿಂಪಡೆಯಬೇಕು ಎಂದು ಶಾಸಕರು ಒತ್ತಾಯಿಸಿದರು.

RELATED ARTICLES
- Advertisment -
Google search engine

Most Popular