ಹೆಚ್. ಡಿ ಕೋಟೆ, ಜುಲೈ ೧೪(ಶಶಿಧರ್ ಕೆ.ಎಸ್): ಚಾಮರಾಜನಗರ ಲೋಕಸಭಾ ಕ್ಷೇತ್ರದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಚಿವ ಎಮ್ ಶಿವಣ್ಣ ಹೇಳಿದ್ದಾರೆ.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಮುಖಂಡರ ಸಭೆಯಲ್ಲಿ ಮಾತಾಡಿದ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ .ಅನೇಕ ಕಾರಣಾಂತರಗಳಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಪಕ್ಷ ಗೆಲುವು ಸಾಧಿಸಿದೆ. ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿ ಮಂತ್ರಿಯಾಗಿ ಮುಂದುವರಿಸಲು ಜನರು ಮುಂದಾಗಿದ್ದಾರೆ ಎಂದು ಮಾಜಿ ಸಚಿವ ಎಮ್ ಶಿವಣ್ಣ ಹೇಳಿದ್ದಾರೆ. ಸಭೆಯಲ್ಲಿ ಮಾಜಿ ಶಾಸಕರಾದ ಮಹೇಶ್ ಬಾಲರಾಜು ಗುರುಸ್ವಾಮಿ ವೆಂಕಟಸ್ವಾಮಿ ಲಕ್ಷ್ಮಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು