Friday, April 4, 2025
Google search engine

Homeರಾಜ್ಯರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ

ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ

ನವದೆಹಲಿ: ಮೆಟ್ರೋ ದರ ಏರಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಪತ್ರ ಬರೆದರೆ ನಾಳೆಯೇ ಸಮಿತಿ ರಚನೆಯಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸದಸ್ಯ ತೇಜಸ್ವಿ ಸೂರ್ಯ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಿರುವ ದರ ಪರಿಷ್ಕರಣೆಯನ್ನುಮೆಟ್ರೋ ನಿಯಮಗಳಲ್ಲಿ ತಡೆ ಹಿಡಿಯಲು ಸಾಧ್ಯವಿಲ್ಲ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ ಕೋರ್ಟ್ ಮಧ್ಯಪ್ರವೇಶ ಮಾಡುತ್ತಾ ಗೊತ್ತಿಲ್ಲ ಎಂದು ಹೇಳಿದರು.

ನಾನು ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಪ್ರಯಾಣಿಕರ ಸಂಖ್ಯೆ ಕುಸಿತದ ಬಗ್ಗೆಯೂ ಗಮನಕ್ಕೆ ತರಲಾಗಿದೆ. ಅವರು ರಾಜ್ಯ ಸರ್ಕಾರ ಮತ್ತೊಮ್ಮೆ ಪತ್ರ ಬರೆದು ದರ ಪರಿಷ್ಕರಣೆ ಮಾಡಲು ಮನವಿ ಮಾಡಿದರೆ ಮತ್ತೊಮ್ಮೆ ಸಮಿತಿ ರಚಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದಿಂದ ಸಿಎಂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಇದರಿಂದ ಮಾತ್ರ ದರ ಇಳಿಕೆ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಮೆಟ್ರೋ ದರಗಳು ಏರಿಕೆಯಾಗಿ ಜನರಿಗೆ ಸಮಸ್ಯೆಯಾಗಿದೆ. ಮಧ್ಯಮ ವರ್ಗದ ಜನರಿಗೆ ಇನ್ನು ತೊಂದರೆಯಾಗಿದೆ. ಏಕಾಏಕಿ ಮೆಟ್ರೋ ದರವನ್ನು 50%, 100% ಏರಿಕೆಯಾಗಿದೆ. ಸಂಬಳದ ದೊಡ್ಡ ಭಾಗ ಈಗ ಮೆಟ್ರೋಗೆ ಕೊಡಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ನಿರ್ದೇಶನ ಮೇರೆಗೆ ಅಧಿಕಾರಿಗಳು ದರ ನಿಗದಿ ಮಾಡಲು ಸಮಿತಿ ರಚಿಸುವ ಪ್ರಕ್ರಿಯೆ ಶುರು ಮಾಡಿದರು. ಮೆಟ್ರೋ ಕಂಪನಿ ಮತ್ತು ರಾಜ್ಯ ಸರ್ಕಾರ ದರ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡುತ್ತದೆ. ಸಮಿತಿ ರಾಜ್ಯ ಸರ್ಕಾರ ಹಾಗೂ ಬಿಎಂಆರ್‌ಸಿಎಲ್‌ನಿಂದ ಮಾಹಿತಿ ಪಡೆದು ಪರಿಷ್ಕೃತ ದರ ಪಟ್ಟಿ ನಿಗದಿ ಮಾಡುತ್ತದೆ. ಸಮಿತಿ ನಿಗದಿ ಮಾಡಿದ ದರ ಪರಿಷ್ಕರಣೆಯನ್ನು ಅನುಷ್ಠಾನ ಮಾಡಬೇಕು ಎಂದು ಕಾನೂನು ಹೇಳುತ್ತದೆ ಎಂದು ತಿಳಿಸಿದರು.

ಮಂಗಳವಾರ ಲೋಕಸಭೆಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದೇನೆ. ಟ್ರಾಫಿಕ್ ಸಮಸ್ಯೆಗೆ ಜನರು ಮೆಟ್ರೋ ಬಳಸುತ್ತಾರೆ. ಆದರೆ ಈ ಪ್ರಮಾಣದಲ್ಲಿ ದರ ಏರಿಸಿದರೆ ಜನರು ಬೈಕಿನಲ್ಲಿ ಹೋಗುತ್ತಾರೆ. ಸಾರ್ವಜನಿಕ ಸಾರಿಗೆ ಪ್ರೊತ್ಸಾಹ ಮಾಡಬೇಕಿತ್ತು ಇದು ಸರ್ಕಾರದ ಕರ್ತವ್ಯ. ಆದರೆ ಇದು ಕೇಂದ್ರ ಸರ್ಕಾರದ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ದೂರಿದರು.

ದರ ಪರಿಷ್ಕರಣೆಗೆ ಪತ್ರ ಬರೆದಿದ್ದೆ ರಾಜ್ಯ ಸರ್ಕಾರ. ಈ ವಿಚಾರವನ್ನು ಅವರು ಹೇಳುತ್ತಿಲ್ಲ. ಬರೀ ಮೆಟ್ರೋ ಅಲ್ಲ ನೋಂದಣಿ ಶುಲ್ಕ, ವಾಹನ ನೋಂದಣಿ, ಆಸ್ಪತ್ರೆ ಸೇವಾ ಶುಲ್ಕ, ಕಾಲೇಜು ಫಿ, ಎಲೆಕ್ಟ್ರೀಕ್ ವಾಹನಗಳ ಮೇಲೂ ತೆರಿಗೆ ಹಾಕಿದೆ. ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಇದು ಆರೋಪದ ಸಮಯ ಅಲ್ಲ, ಸಮಸ್ಯೆ ಬಗೆಹರಿಸಬೇಕು ಎಂದರು.

RELATED ARTICLES
- Advertisment -
Google search engine

Most Popular