Friday, April 11, 2025
Google search engine

Homeರಾಜ್ಯಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆ ಬಿಲ್ ಸಿದ್ಧ: 3 ವರ್ಷ ಜೈಲು, 1 ಲಕ್ಷ ದಂಡ

ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆ ಬಿಲ್ ಸಿದ್ಧ: 3 ವರ್ಷ ಜೈಲು, 1 ಲಕ್ಷ ದಂಡ

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ದೌರ್ಜನ್ಯ ಹಾಗೂ ಸಾಲಗಾರರ ಆತ್ಮಹತ್ಯೆ ಪ್ರಕರಣಗಳ ತಡೆಗೆ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಕರಡು ವಿಧೇಯಕ ಸಿದ್ಧಪಡಿಸಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆ ಹೊರಡಿಸುವ ಸಾಧ್ಯತೆ ಇದೆ.

ಗುರುವಾರ ನಡೆಯುವ ಸಚಿವ ಸಂಪುಟ ಸಭೆಯ ಅಜೆಂಡಾದಲ್ಲಿ ಕಾನೂನು ಇಲಾಖೆಯಿಂದ ಕರ್ನಾಟಕ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಣ ಮತ್ತು ಲೇವಾದೇವಿ ನಿಯಂತ್ರಣ 2025ರ ಕರಡು ಬಿಲ್ ಸೇರ್ಪಡೆಯಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಮೊದಲ ಆದ್ಯತಾ ವಿಷಯವಾಗಿ ಬಿಲ್ ಸುಗ್ರೀವಾಜ್ಞೆ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗರಿಷ್ಠ 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ ವಿಧಿಸಲು ಕರಡು ಬಿಲ್‌ನಲ್ಲಿ ಕಾನೂನು ಅಡಕವಾಗಿದೆ. ಅಷ್ಟೇ ಅಲ್ಲದೆ ನೋಂದಣಿ ಪ್ರಾಧಿಕಾರದ ಮೂಲಕ ಮೈಕ್ರೋ ಫೈನಾನ್ಸ್ ಕಡ್ಡಾಯ ನೋಂದಣಿ ರೂಲ್ಸ್ ತರುತ್ತಿದ್ದು, ಆರ್‌ಬಿಐ ರೂಲ್ಸ್ ಪ್ರಕಾರ ಸಾಲ‌ಮಿತಿ, ಬಡ್ಡಿ ಮಿತಿಗಳನ್ನ ಪಾಲಿಸಬೇಕೆಂಬ ಷರತ್ತು ಸುಗ್ರೀವಾಜ್ಞೆಯಲ್ಲಿ ಇದೆ ಎನ್ನಲಾಗಿದೆ.

ಸಾಲ ವಸೂಲಾತಿಗೂ ಕಠಿಣ ಷರತ್ತುಗಳನ್ನು ಹಾಕಲಾಗ್ತಿದ್ದು, ಕಿರುಕುಳಕ್ಕೆ ಮುಲಾಜಿಲ್ಲದೇ ಕ್ರಮಕ್ಕೆ ಸುಗ್ರೀವಾಜ್ಞೆ ತರಲಾಗ್ತಿದೆ. ಜ.30, ಗುರುವಾರ ಸುಗ್ರೀವಾಜ್ಞೆ ತರುತ್ತಿದ್ದು, ಕರಡು ಬಿಲ್ ಬಗ್ಗೆ ಚರ್ಚಿಸಿ ಕೆಲ ಸಣ್ಣಪುಟ್ಟ ಮಾರ್ಪಾಡುಗಳನ್ನೂ ಮಾಡುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular