ಮಂಡ್ಯ: ಮಿಕ್ಕೆರೆ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಕಮಲ ಜಯರಾಮು , ಉಪಾಧ್ಯಕ್ಷರಾಗಿ ಶಿಲ್ಪ ಮಂಚಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಸದಸ್ಯರು ಅಭಿನಂದಿಸಿದ್ದು, ಇದೇ ವೇಳೆ ನೂತನ ಅಧ್ಯಕ್ಷ ಕಮಲ ಜಯರಾಮು ಮಾತನಾಡಿ ಗ್ರಾಮಗಳ ಅಭಿವೃದ್ಧಿಗೆ ನಾವು ಮುಂದಾಗುತ್ತೇವೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚು ಒತ್ತುನೀಡುತ್ತೇವೆ. ಹೆಚ್ಚು ಹೆಚ್ಚು ಅನುದಾನ ತಂದು ಮತ್ತಷ್ಟು ಅಭಿವೃದ್ಧಿ ಪಡಿಸುತ್ತೇವೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಸೇರಿ ಹಲವಾರು ಮಂದಿ ಭಾಗಿಯಾಗಿದ್ದರು.