ಬೆಂಗಳೂರು : ರಾಜ್ಯದಲ್ಲಿ ಕೆಎಂಎಫ್ ನಂದಿನಿ ಹಾಲಿ ದರ ಪ್ರತಿ ಲೀಟರ್ ಗೆ ೨.೧೦ ರೂ ಹೆಚ್ಚಳ ಮಾಡಲಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿನ ಹಾಲಿನ ದರವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿಲ್ಲ. ಹಾಲಿನ ದರವನ್ನು ಏರಿಕೆ ಮಾಡುವುದು ಕೆಎಂಎಫ್. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ಹೇಳಿದ್ದಾರೆ.