ಬೆಂಗಳೂರು: ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹಾಲಿನ ದರ ಏರಿಕೆ ಸಂಬಂಧಪಟ್ಟ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಮನ್ ಮುಲ್ ಹಾಲಿನ ದರ ಏರಿಕೆಯ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನೆನ್ನೆ ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದ್ದು, ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ಸರ್ಕಾರದ ಮುಂದೆ ಇಡಲಾಗುವುದು. ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಎಲ್ಲರೂ ಬದ್ಧರಾಗಬೇಕು ಎಂದು ಹೇಳಿದರು.
ಮನ್ ಮುಲ್ ಅಧ್ಯಕ್ಷ ಸ್ಥಾನಕ್ಕೆ ಜುಲೈ 24ರಂದು ದಿನಾಂಕ ನಿಗದಿಪಡಿಸಿದ್ದಾರೆ. ಅಂದು ಚುನಾವಣೆ ನಡೆಯುತ್ತದೆ. ಅದು ಸ್ವತಂತ್ರವಾಗಿ ನಡೆಯುವ ಚುನಾವಣೆ ಆಗಿರುವುದರಿಂದ ಯಾರು ಅಧ್ಯಕ್ಷರಾಗುತ್ತಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.
ಗೃಹಲಕ್ಷ್ಮಿ ಯೋಜನೆ ಇನ್ನೆರಡು ದಿನಗಳಲ್ಲಿ ಜಾರಿಗೆ ಬರಲಿದೆ. ಎಲ್ಲರಿಗೂ ತಲುಪುವ ವ್ಯವಸ್ಥೆಯನ್ನು ತಂತ್ರಜ್ಞಾನದಲ್ಲಿ ಅಳವಡಿಸಲಾಗಿದೆ. ಕೊಟ್ಟ ಮಾತಿನಂತೆ ನಡೆಯುವ ಸರ್ಕಾರ ನಮ್ಮದು ಎಂದರು.
ಬಿಜೆಪಿ ಕೇಂದ್ರ ಸರ್ಕಾರ ನಮಗೆ ಅಕ್ಕಿ ನೀಡದಿದ್ದರೂ ಕೂಡ ಪರ್ಯಾಯವಾಗಿ ಹಣ ನೀಡುವ ವ್ಯವಸ್ಥೆಯನ್ನು ಮಾಡಿದ್ದೇವೆ. ಗೃಹ ಲಕ್ಷ್ಮಿ, ಗೃಹ ಗೃಹಜೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಜಾರಿಗೆ ತಂದಿದ್ದು ಮುಂದಿನ ದಿನಗಳಲ್ಲಿ ಪದವಿ ವಿದ್ಯಾರ್ಥಿಗಳಿಗೂ ನೀಡಲಾಗುತ್ತದೆ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ. ಅವರು ಯಾವ ರೀತಿ ಏನು ಮೈತ್ರಿ ಮಾಡಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದ ಅವರು, ನಾಗಮಂಗಲದಲ್ಲಿ ಚೆಲುವರಾಯಸ್ವಾಮಿ ದ್ವೇಷದ ರಾಜಕೀಯ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರ ನಡೆಸಿದಾಗ ಈ ರೀತಿ ಏನು ಮಾಡಲಿಲ್ಲ ಅವರೆಲ್ಲ ಪ್ರಾಮಾಣಿಕರು. ತನಿಖೆ ನಡೆಯುತ್ತಿದೆ ಮುಂದೆ ನೋಡೋಣ ಎಂದರು.