Friday, April 4, 2025
Google search engine

Homeರಾಜ್ಯಸುದ್ದಿಜಾಲಹಾಲು ಉತ್ಪಾದಕರ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಮೈಸೂರು ಜಿಲ್ಲಾ ಒಕ್ಕೂಟ ರಾಜ್ಯದಲ್ಲಿಯೇ ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿ ಇದ್ದು, ಇದು ಜಿಲ್ಲೆಯ ರೈತರ ಕೊಡುಗೆ ಎಂದು ಮೈಸೂರು ಹಾಲು ಒಕ್ಕೂಟದ ನಿರ್ದೇಶಕ ಎ ಟಿ ಸೋಮಶೇಖರ್ ಹೇಳಿದರು.

ಸಾಲಿಗ್ರಾಮ ತಾಲೂಕಿನ ಹಳಿಯೂರು ಬಡಾವಣೆಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು ಸಹಕಾರ ಸಂಘಗಳನ್ನು ರಾಜಕೀಯದಿಂದ ಮುಕ್ತಗೊಳಿಸುವ ಕಾರ್ಯ ನಡೆಯಬೇಕಿದ್ದು ರೈತರ ಸಂಸ್ಥೆಯಾಗಿಯೇ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಮೈಮುಲ್ ವತಿಯಿಂದ ರಾಜ್ಯದಲ್ಲಿಯೇ ಅತಿ ಹೆಚ್ಚಿನ ದರದಲ್ಲಿ ಹಾಲು ಖರೀದಿ ಮಾಡಲಾಗುತ್ತಿದ್ದು ರೈತರು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸಹಕಾರ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೂತನ ಕೃಷಿಕ ಸಮಾಜ ನಿರ್ದೇಶಕರಾದ ಬಿ.ರಮೇಶ್, ಹೆಚ್.ಕೀರ್ತಿ, ಡಿ.ಸಿ.ರಾಮೇಗೌಡ ಅವರನ್ನು‌ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಡೈರಿ ಅಧ್ಯಕ್ಷ ಎಚ್ ಆರ್ ಕೃಷ್ಣಮೂರ್ತಿ, ನಿರ್ದೇಶಕರಾದ ಎಚ್.ಬಿ. ಜಯಣ್ಣ, ಎಚ್‌ಎಸ್.ಅಜಯ್, ರಂಗೇಗೌಡ, ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಹರಿಚಿದಂಬರ್, ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಎಸ್ ಟಿ ಕೀರ್ತಿ, ಸುದರ್ಶನ್, ಹೊಸೂರು ಡೈರಿ ಅಧ್ಯಕ್ಷ ಸ್ವಾಮಿ, ನಿರ್ದೇಶಕ ಬುದ್ಧಿಸಾಗರ ಹಳಿಯೂರು ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣ, ವಿಸ್ತರಣಾಧಿಕಾರಿ ಅಭಿಷೇಕ್, ಸಂಘದ ಕಾರ್ಯದರ್ಶಿ ರಾಜೇಶ್, ನಾಗರಾಜ್, ಸುಬ್ಬೇಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular