Thursday, December 18, 2025
Google search engine

Homeದೇಶಭಾರತದ ಪೌರತ್ವವನ್ನು ತ್ಯಜಿಸುತ್ತಿರುವ ಲಕ್ಷಾಂತರ ಭಾರತಿಯರು!

ಭಾರತದ ಪೌರತ್ವವನ್ನು ತ್ಯಜಿಸುತ್ತಿರುವ ಲಕ್ಷಾಂತರ ಭಾರತಿಯರು!

ನವದೆಹಲಿ: ವರ್ಷಕ್ಕೆ ಎರಡು ಲಕ್ಷಕ್ಕೂ ಭಾರತೀಯರು ಪೌರತ್ವವನ್ನು ತ್ಯಜಿಸುತ್ತಿದ್ದು, ಕಳೆದ ಐದು ವರ್ಷಗಳಲ್ಲಿ ಒಂಬತ್ತು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಇನ್ನೂ 2022ರಿಂದ ವರ್ಷಕ್ಕೆ 2 ಲಕ್ಷಕ್ಕೂ ಹೆಚ್ಚು ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ ಎಂದು ಚಳಿಗಾಲದ ಅಧಿವೇಶನದಲ್ಲಿ ವಿದೇಶಾಂಗ ಸಚಿವಾಲಯವು ಅಂಕಿ ಅಂಶಗಳ ಸಹಿತ ಸಂಸತ್ತಿಗೆ ಮಾಹಿತಿ ನೀಡಿದೆ. ಇದರಲ್ಲಿ ಹಲವಾರು ಮಂದಿ ವೈಯಕ್ತಿಕ ಅನುಕೂಲಕ್ಕಾಗಿ ವಿದೇಶಿ ಪೌರತ್ವವನ್ನು ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.

ಹುಟ್ಟಿ ಬೆಳೆದ ಊರು ಬಿಟ್ಟು ಬರುವುದೇ ಕಷ್ಟವಾಗಿರುತ್ತದೆ. ಹೀಗಿರುವಾಗ ಲಕ್ಷಾಂತರ ಭಾರತೀಯರು ದೇಶವನ್ನೇ ಶಾಶ್ವತವಾಗಿ ಬಿಟ್ಟು ಹೋಗುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಸುಮಾರು ಲಕ್ಷಾಂತರ ಭಾರತೀಯರು ದೇಶವನ್ನು ಬಿಟ್ಟು ಹೋಗಿದ್ದಾರೆ. 2020 ರಿಂದ ಒಂಬತ್ತು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ಬಿಟ್ಟು ಬೇರೆಬೇರೆ ದೇಶಗಳ ಪೌರತ್ವವನ್ನು ಪಡೆದಿದ್ದಾರೆ. 2022ರಿಂದ ಪ್ರತಿ ವರ್ಷ ಎರಡು ಲಕ್ಷಕ್ಕೂ ಹೆಚ್ಚು ಭಾರತೀಯ ಪೌರತ್ವವನ್ನು ತ್ಯಜಿಸುತ್ತಿದ್ದಾರೆ ಎಂಬುದಾಗಿ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕದ ಬಳಿಕ ದೇಶವನ್ನು ತ್ಯಜಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ವಿದೇಶಾಂಗ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, 2011 ಮತ್ತು 2024 ರ ನಡುವೆ 2.06 ಮಿಲಿಯನ್ ಅಂದರೆ 20 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಇದರಲ್ಲಿ ಅರ್ಧದಷ್ಟು ಕಳೆದ ಐದು ವರ್ಷಗಳಲ್ಲಿ ನಡೆದಿದೆ ಎನ್ನಲಾಗಿದೆ.

ವೈಯಕ್ತಿಕ ಅನುಕೂಲಕ್ಕಾಗಿ ವಿದೇಶಿ ಪೌರತ್ವವನ್ನು ಆಯ್ಕೆ ಮಾಡುತ್ತಿರುವುದಾಗಿ ಅನೇಕರು ತಿಳಿಸಿರುವುದು ವಿದೇಶಾಂಗ ಸಚಿವಾಲಯದ ಮಾಹಿತಿ ತಿಳಿಸಿದೆ.
ಭಾರತೀಯರು ಹೆಚ್ಚಾಗಿ ಯುಎಸ್, ಯುಕೆ ಅಥವಾ ಕೆನಡಾದ ಪಾಸ್‌ಪೋರ್ಟ್‌ಗಾಗಿ ಭಾರತದ ಪಾಸ್‌ಪೋರ್ಟ್‌ಗಳನ್ನು ತ್ಯಜಿಸುತ್ತಿದ್ದಾರೆ. ಇದಕ್ಕೆ ಒಂದು ಕಾರಣವೆಂದರೆ ಭಾರತವು ದ್ವಿಪೌರತ್ವಕ್ಕೆ ಅನುಮತಿ ನೀಡುವುದಿಲ್ಲ.

ಭಾರತೀಯ ಕಾನೂನಿನಡಿಯಲ್ಲಿ ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರು ಸ್ವಯಂಪ್ರೇರಣೆಯಿಂದ ಮತ್ತೊಂದು ದೇಶದ ಪೌರತ್ವವನ್ನು ಪಡೆದ ಅನಂತರ ಸ್ವಯಂಚಾಲಿತವಾಗಿ ದೇಶದ ಪೌರತ್ವವನ್ನು ಕಳೆದುಕೊಳ್ಳುತ್ತಾರೆ.

ಉದ್ಯೋಗದ ನಿಮಿತ್ತ ವಿದೇಶಕ್ಕೆ ಹೋಗುವವರು ಅಲ್ಲಿ ಪೂರ್ಣ ನಾಗರಿಕ ಮತ್ತು ವೃತ್ತಿಪರ ಹಕ್ಕುಗಳನ್ನು ಪಡೆಯಲು ವಿದೇಶಿ ಪೌರತ್ವವನ್ನು ಪಡೆಯುವುದು ಅಗತ್ಯವಾಗಿರುತ್ತದೆ. ಹೀಗಾಗಿ ಅವರು ದೇಶದ ಪೌರತ್ವವವನ್ನು ಬಿಡಲೇಬೇಕಾಗುತ್ತದೆ. ಇದರಿಂದ ಅವರು ಅಲ್ಲಿ ಮತದಾನ, ಸಾಮಾಜಿಕ ಭದ್ರತಾ ಪ್ರಯೋಜನಗಳು, ಅನಿಯಂತ್ರಿತ ನಿವಾಸ, ಸಾರ್ವಜನಿಕ ವಲಯದ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ.

ಭಾರತದ ಸಾಗರೋತ್ತರ ನಾಗರಿಕ ಸ್ಥಾನಮಾನವು ವೀಸಾ ಮುಕ್ತ ಪ್ರಯಾಣ ಮತ್ತು ಸೀಮಿತ ಆರ್ಥಿಕ ಹಕ್ಕುಗಳನ್ನು ನೀಡುತ್ತದೆ. ಆದರೆ ಇದು ಯಾವುದೇ ರಾಜಕೀಯ ಹಕ್ಕುಗಳನ್ನು ನೀಡುವುದಿಲ್ಲ. ಹೀಗಾಗಿ ವಿದೇಶಗಳಲ್ಲಿ ಶಾಶ್ವತವಾಗಿ ನೆಲೆಸಿರುವ ವಲಸಿಗರಿಗೆ ವಿಶೇಷವಾಗಿ ಕುಟುಂಬಗಳನ್ನು ಹೊಂದಿರುವವರಿಗೆ ವಿದೇಶಿ ಪೌರತ್ವವು ಅಗತ್ಯವಾಗುತ್ತದೆ. ಆದ್ದರಿಂದ ಅವರು ಭಾರತೀಯ ಪೌರತ್ವವನ್ನು ತ್ಯಜಿಸುವ ನಿರ್ಣಯ ಕೈಗೊಳ್ಳುತ್ತಾರೆ.

RELATED ARTICLES
- Advertisment -
Google search engine

Most Popular