Friday, April 4, 2025
Google search engine

Homeಅಪರಾಧಲಕ್ಷಾಂತರ ರೂ. ಬೆಲೆ ಬಾಳುವ ತಿಮಿಂಗಿಲ ವಾಂತಿ ಸಾಗಣೆ: ಇಬ್ಬರ ಬಂಧನ

ಲಕ್ಷಾಂತರ ರೂ. ಬೆಲೆ ಬಾಳುವ ತಿಮಿಂಗಿಲ ವಾಂತಿ ಸಾಗಣೆ: ಇಬ್ಬರ ಬಂಧನ

ಚಾಮರಾಜನಗರ: ಬೆಂಗಳೂರಿನಿಂದ ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಕೊಳ್ಳೇಗಾಲದ ಹೊಸ ಅಣಗಳ್ಳಿ ಸಮೀಪ ಬಂಧಿಸಿದ್ದಾರೆ.

ಮೈಸೂರು ಆಶೋಕಪುರಂ ನಿವಾಸಿ ವಸಂತ ಕುಮಾರ್ (50), ರಾಮನಗರ ಜಿಲ್ಲೆಯ ಮೂಲದ ವೈರಮುಡಿ (40) ಬಂಧಿತರಾಗಿದ್ದಾರೆ.

ಅಂಬರ್ ಗ್ರೀಸ್ ಸಾಗಾಟದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರನ್ನು ತಡೆದು ಪರಿಶೀಲಿಸಿದಾಗ ಕಾರಿನ ಡಿಕ್ಕಿಯಲ್ಲಿಟ್ಟಿದ್ದ 4.386 ಕೆಜಿ ತಿಮಿಂಗಿಲ ವಾಂತಿ ವಶಪಡಿಸಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular