ಮದ್ದೂರು: ಇತ್ತೀಚೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ೬ ನೇ ಗ್ಯಾರಂಟಿ ಘೋಷಣೆಯಾಗುತ್ತದೆ ಎಂದು ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದು, ಅವರು ಹೇಳಿರುವ ಹೇಳಿಕೆ ಬಗ್ಗೆ ಅವರಿಗೆ ಈಗಾಗಲೇ ಖಾತ್ರಿಪಡಿಸಿದ್ದಾರೆ. ನನಗೆ ಈ ವಿಷಯ ತಿಳಿದ ತಕ್ಷಣ ಈ ಬಗ್ಗೆ ಹೇಳುತ್ತೇನೆ ಎಂದರು.
ಇತ್ತೀಚೆಗೆ ನಡೆದ ರಾಜ್ಯ ಸಭಾ ಚುನಾವಣಾ ಸಂದರ್ಭದಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾಂದ್ ಎಂಬ ಘೋಷಣೆ ಕೂಗಿರುವುದರ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದಲ್ಲಿ ಆರೋಪಿಗಳಿಗೆ ತಕ್ಕ ಶಿಸ್ತು ಕಾನೂನು ಕ್ರಮವಾಗುತ್ತದೆ. ಯಾರೇ ಆಗಲಿ ಇಂತಹ ದೇಶದ್ರೋಹಿ ಘೋಷಣೆ ಕೂಗಿರುವುದು ಅಪರಾಧವೆಂದರು.
ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದ ಆರೋಪಿಯನ್ನು ಇನ್ನೂ ಬಂಧಿಸಿಲ್ಲ ಎಂದು ವಿರೋಧ ಪಕ್ಷದವರು ಟೀಕಿಸುತ್ರಿರುವುದರ ಬಗ್ಗೆ ಹೇಳಿಕೆ ನೀಡಿದ ಅವರು, ಕೂಡಲೇ ಆರೋಪಿಯನ್ನು ಬಂಧಿಸಲಾಗುವುದು ಎಂದರು. ಬೆಳೆಗಳಿಗೆ ನೀರು ಹರಿಸುವ ಸಂಬಂಧ ಮತ್ತೊಮ್ಮ ಅಧಿಕಾರಿಗಳೊಂದಿಗೆ ಚರ್ಚಿಸಿ ನೀರು ಬಿಡಲು ಪ್ರಯತ್ನ ಮಾಡಲಾಗುವುದು ಎಂದರು.