ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನ ಪಡೀಲ್ ಎಂಬಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ಜಿಲ್ಲಾಧಿಕಾರಿ ಕಚೇರಿಯ ಹೊಸ ಕಟ್ಟಡವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ವೀಕ್ಷಣೆ ಮಾಡಿದ್ರು.
ಇದೇ ವೇಳೆ ಮಾತನಾಡಿದ ಅವರು, ಎಪ್ರಿಲ್ ತಿಂಗಳ ಕೊನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ನೂತನ ಕಚೇರಿ ಉದ್ಘಾಟನೆ ಆಗಲಿದೆ. 56 ಕೋಟಿ ಇದ್ದ ಯೋಜನೆ, ಈಗ 76 ಕೋಟಿಗೇರಿದೆ ಎಂದರು. ಇದೇ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಂಎಲ್ ಸಿ ಮಂಜುನಾಥ ಭಂಡಾರಿ ಸೇರಿದಂತೆ ಹಲವಾರು ಮಂದಿ ಹಾಜರಿದ್ದರು.