ಮೈಸೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಗುರುವಾರ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶತಮಾನೋತ್ಸವ ಪೂರೈಸುತ್ತಿರುವ ಕೆ.ಅರ್.ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದರು. ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಇದೇ ವೇಳೆ ಶಾಸಕ ಕೆ.ಹರೀಶ್ ಗೌಡ, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಡಾ.ಪದ್ಮಿನಿ, ಡಾ.ಆನಂದ ರವಿ ಉಪಸ್ಥಿತರಿದ್ದರು.