Tuesday, May 20, 2025
Google search engine

Homeರಾಜಕೀಯಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ. ಎನ್‌ ರಾಜಣ್ಣ ನಿವೃತ್ತಿ

ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ. ಎನ್‌ ರಾಜಣ್ಣ ನಿವೃತ್ತಿ

ಬೆಂಗಳೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಘೋಷಿಸಿದ್ದಾರೆ. ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ ಎಂಬುವುದಾಗಿ ತಿಳಿಸಿದರು.

ಕೆ. ಎನ್. ರಾಜಣ್ಣ ಹಾಲಿ ಮಧುಗಿರಿ ಕ್ಷೇತ್ರದ ಶಾಸಕರು. 2023ರ ವಿಧಾನಸಭೆ ಚುನಾವಣೆಯಲ್ಲಿ 91,166 ಮತಗಳನ್ನು ಪಡೆದು ಜೆಡಿಎಸ್‌ನ ಎಂ. ವಿ. ವೀರಭದ್ರಯ್ಯ ಸೋಲಿಸಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಹಕಾರ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರು.

ಇನ್ನು ಇದೇ ವೇಳೆ ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರವನ್ನು ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಹಕಾರ ಕ್ಷೇತ್ರದ ಕಾಯ್ದೆಯಲ್ಲಿ ತಿದ್ದುಪಡಿ ತರಲು ರಾಜ್ಯಪಾಲರ ಅಂಕಿತದ ನಂತರ ಕೇಂದ್ರಕ್ಕೆ ಕಳುಹಿಸುವ ಅಗತ್ಯವಿಲ್ಲ. ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾದ ಅಗತ್ಯವಿಲ್ಲ. ಈ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂಬುವುದಾಗಿ ಸ್ಪಷ್ಟಪಡಿಸಿದರು.

RELATED ARTICLES
- Advertisment -
Google search engine

Most Popular