Friday, April 18, 2025
Google search engine

Homeರಾಜ್ಯ700 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

700 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು : ರಾಜಧಾನಿ ಬೆಂಗಳೂರು, ಪೂರ್ವ ತಾಲೂಕು, ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.೪೮ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ ೨೨. ಎಕರೆ ೮ ಗುಂಟೆ ಜಮೀನಿನ ಮರು ವಶಕ್ಕೆ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ೧೯೯೯-೨೦೦೦ ಸಾಲಿನಲ್ಲಿ ಕೊತ್ತನೂರು ಗ್ರಾಮದ ಸರ್ವೆ ನಂ.೪೮ರಲ್ಲಿ ೨೨.೦೮ ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ. ಆದರೆ ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲವಾಗಿರುವ ಇಲಾಖೆಯ ಹಿಂದಿನ ಅಧಿಕಾರಿಗಳ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆಗೆ ಮಂಜೂರಾದ ೨೨.೦೮ ಎಕರೆ ಭೂಮಿಯ ಪೈಕಿ ೧೩ ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಸಂಖ್ಯೆ ಆರ್.ಎಚ್.ಎಸ್.(೨) ೪೪/೮೨-೮೩ ಡಿ.ಟಿ. ೨೫.೦೧.೨೦೦೦ರ ಆದೇಶದಂತೆ ಪಹಣಿ (ಆರ್.ಟಿ.ಸಿ.)ಯಲ್ಲಿ ನಮೂದಾಗಿದೆ. ಈ ಜಮೀನಿನ ನಕ್ಷೆ ಪಡೆದು ಉಳಿದ ೯ ಎಕರೆಯ ದಾಖಲೆಗಳನ್ನೂ ಮಾಡಿಸಿ, ಸುಮಾರು ೭೦೦ ಕೋಟಿ ರೂ. ಬೆಲೆ ಬಾಳುವ ಜಮೀನು ಒತ್ತುವರಿಯಾಗಿದ್ದರೆ ಅದನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ೬೪(ಎ) ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಈಶ್ವರ ಖಂಡ್ರೆ ಟಿಪ್ಪಣಿಯನ್ನೂ ನೀಡಿದ್ದಾರೆ.

ಕಾನೂನು ಬಾಹೀರವಾಗಿ ಅರಣ್ಯ ಭೂಮಿಯನ್ನು ಕಂದಾಯ ಎಂದು ಮಾರ್ಪಾಡು ಮಾಡಿದ್ದ ಅಂದಿನ ಅಸಿಸ್ಟೆಂಟ್ ಕಮಿಷನರ್ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶ ನೀಡಿದ್ದರು. ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ ೧೯೮೦ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular