Saturday, April 19, 2025
Google search engine

Homeರಾಜ್ಯಬ್ಯಾಂಕ್ ದರೋಡೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಈಶ್ವರ ಖಂಡ್ರೆ

ಬ್ಯಾಂಕ್ ದರೋಡೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಈಶ್ವರ ಖಂಡ್ರೆ

ಬೀದರ್: ನಗರದಲ್ಲಿ ನಿನ್ನೆ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ದರೋಡೆ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅವರು ಸಚಿವ ರಹೀಂಖಾನ್ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹರಿಶೇಖರನ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಘಟನೆಯ ಮಾಹಿತಿ ಪಡೆದ ಸಚಿವರು, ತನಿಖೆಯನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದರು. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಬಂಧಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ಮೃತ ಗಿರಿ ವೆಂಕಟೇಶ್ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ಅವರ ಕುಟುಂಬದ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ. ಮೃತರ ಕುಟುಂಬಕ್ಕೆ ವಿಶೇಷ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ನಿನ್ನೆ ರಾತ್ರಿ ತಾವು ಹೈದ್ರಾಬಾದ್ ನ ಕೇರ್ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಧೈರ್ಯ ಹೇಳಿದ್ದು, ವೈದ್ಯರಿಗೆ ಉತ್ತಮ ಚಿಕಿತ್ಸೆ ನೀಡಲು ತಿಳಿಸಿದ್ದಾಗಿ ಹೇಳಿದರು. ಚಿಕಿತ್ಸೆ ವೆಚ್ಚವನ್ನು ಖಾಸಗಿ ಮತ್ತು ಸರ್ಕಾರದಿಂದ ಭರಿಸಲಾಗುವುದು ಎಂದೂ ಅವರು ತಿಳಿಸಿದರು.

ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಅವರು ಎಲ್ಲ ವಿಚಾರದಲ್ಲೂ ರಾಜಕೀಯ ಬೆರೆಸಿ ಮಾತನಾಡುವುದು ಸರಿಯಲ್ಲ. ಪೊಲೀಸರು ಆರೋಪಿಗಳನ್ನು ಬಂಧಿಸಲು ಶ್ರಮಿಸುತ್ತಿದ್ದಾರೆ. ಈಗಾಗಲೇ ದರೋಡೆಕೋರರ ಬಗ್ಗೆ ಸುಳಿವು ಸಿಕ್ಕಿದ್ದು ಶೀಘ್ರ ಬಂಧಿಸಲಾಗುವುದು ಎಂದೂ ತಿಳಿಸಿದರು. ಬೀದರ್ ಜಿಲ್ಲೆಯಲ್ಲಿ ಪೊಲೀಸ್ ವ್ಯವಸ್ಥೆ ಮತ್ತು ಬೇಹುಗಾರಿಕೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ, ಜಿಲ್ಲೆಯ ಜನತೆಗೆ ಸುರಕ್ಷತೆ ನೀಡಲು ಕ್ರಮ ವಹಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

RELATED ARTICLES
- Advertisment -
Google search engine

Most Popular