- ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ : ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ ವೆಂಕಟೇಶ್ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮಾಂತರ ಪ್ರದೇಶಗಳಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವುದರಿಂದ ಗ್ರಾಮಗಳಲ್ಲಿ ನಡೆಯುವ ಹಬ್ಬ ಹರಿದಿನಗಳಿಗೆ ನೆರವಾಗುವುದರ ಜೊತೆಗೆ ಬಡ ಜನರು ಮದುವೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೆ ಉಪಯೋಗಿಸಕೊಳ್ಳಬಹುದು. ಆ ಉದ್ದೇಶದಿಂದ ಪಿರಿಯಾಪಟ್ಟಣ ತಾಲೂಕಿನ ಎಲ್ಲಾ ಗ್ರಾಮಗಳಲ್ಲೂ ಅವಶ್ಯಕತೆಗೆ ತಕ್ಕಂತೆ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತದೆ ಎಂದರು.
ಗ್ರಾಮಾಂತರ ಭಾಗಗಳ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ನಮ್ಮ ಸರ್ಕಾರ ಹೆಚ್ಚು ಒತ್ತು ನೀಡಿದ್ದು, ಯಾವುದೇ ಗ್ರಾಮಗಳಲ್ಲಿ ರಸ್ತೆಗಳು ಹದಗಟ್ಟಿದ್ದರೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ತಕ್ಷಣವೇ ಹೊಸ ರಸ್ತೆ ನಿರ್ಮಿಸಲು ಪ್ರಯತ್ನಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಹೊಲದಪ್ಪ, ಪುಟ್ಟರಾಜು,ಕಾಳೇಗೌಡ,ಪುಟ್ಟಸ್ವಾಮಿಗೌಡ, ರಾಮೇಗೌಡ, ಈ ರಾಜು, ಸುಂದರೇಶ್, ಪ್ರಕಾಶ್, ರಾಜೇಶ್, ನಂಜುಂಡೇಗೌಡ, ಅಂಜನಿ ಗೌಡ, ಶಿವ,ಉಮೇಶ್, ಶಾಮಿಯಾನ ರವಿ, ಸತೀಶ್, ಪುಟ್ಟಪ್ಪ, ರಘು, ಪುನೀತ್, ಜಾನಿ, ನಾರಾಯಣ,ತಹಸಿಲ್ದಾರ್ ನಿಸರ್ಗ ಪ್ರಿಯ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸುನಿಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.