Friday, April 11, 2025
Google search engine

Homeರಾಜ್ಯರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್

ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್

ಬೆಳಗಾವಿ : ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಧರ್ಮಸ್ಥಳ ಸಂಘದ ಮಾದರಿಯಲ್ಲಿ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಹಿರೇ ಬಾಗೇವಾಡಿ ಗ್ರಾಮದಲ್ಲಿ‌ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಕಳೆದ ಹಲವು ವರ್ಷಗಳಿಂದ ಅತ್ಯಂತ ಕ್ರಿಯಾಶೀಲ ಕೆಲಸಗಳ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು, ಅವರಲ್ಲಿ ಅರ್ಥಿಕ ಬಲ ತುಂಬಲು ಪ್ರಯತ್ನಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು.

ಮಹಿಳೆ ಮೂಲತಃ ಸ್ವಾಭಿಮಾನಿ, ಯಾರ ಮುಂದೂ ಕೈ ಒಡ್ಡುವ ಸ್ವಭಾವ ಅವಳದಲ್ಲ. ತನ್ನ ಕಾಲ ಮೇಲೆ ತಾನು ನಿಲ್ಲಬೇಕು, ತಾನೂ ದುಡಿದು ಕುಟುಂಬದ ನೊಗ ಹೊರಬೇಕೆನ್ನುವ ತುಡಿತ ಪ್ರತಿಯೊಬ್ಬ ಮಹಿಳೆಯರಲ್ಲಿರುತ್ತದೆ. ನಮ್ಮ ಸರಕಾರ ಮಹಿಳೆಯರ ಸ್ವಾವಲಂಬನೆಗಾಗಿ, ಸ್ವಾಭಿಮಾನ ಕಾಪಾಡುವುದಕ್ಕಾಗಿ ಪಂಚ ಗ್ಯಾರಂಟಿ ಸೇರಿದಂತೆ ಹಲವಾರು ಯೋಜನೆಗಳನ್ನು ತಂದಿದೆ. ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ನಾನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular