Monday, April 21, 2025
Google search engine

Homeರಾಜ್ಯಬೌದ್ಧ ಧರ್ಮವನ್ನ ಸ್ವೀಕರಿಸುವುದಾಗಿ ಸಚಿವ ಮಹದೇವಪ್ಪ ಘೋಷಣೆ

ಬೌದ್ಧ ಧರ್ಮವನ್ನ ಸ್ವೀಕರಿಸುವುದಾಗಿ ಸಚಿವ ಮಹದೇವಪ್ಪ ಘೋಷಣೆ

ಬೆಂಗಳೂರು: ಬೌದ್ಧ ಧರ್ಮವನ್ನು ಸ್ವೀಕರಿಸುವುದಾಗಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಘೋಷಣೆ ಮಾಡಿದ್ದಾರೆ.

ಇಂದು ಧಮ್ಮ ಚಕ್ರ ಪರಿವರ್ತನಾ ದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶುಭಾಯಶ ಕೋರಿರುವ ಮಹದೇವಪ್ಪ ಅವರು, ನಾನು ಸ್ವಾತಂತ್ರ‍್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ‍್ಯ ಅತ್ಯಂತ ಮುಖ್ಯ ಎಂದು ಬರೆದುಕೊಂಡಿದ್ದಾರೆ.

ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಹೇಳಿ ತನ್ನ 3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಧಮ್ಮ ಚಕ್ರ ಪರಿವರ್ತನಾ ದಿನದಂದು ಎಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು ಎಂದು ಪೋಸ್ಟ್ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular