Friday, April 18, 2025
Google search engine

Homeರಾಜ್ಯಸುದ್ದಿಜಾಲಕನ್ನಡ ಸಾಹಿತ್ಯ ಸಮ್ಮೇಳನ ನೂತನ ಕಚೇರಿಗೆ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ

ಕನ್ನಡ ಸಾಹಿತ್ಯ ಸಮ್ಮೇಳನ ನೂತನ ಕಚೇರಿಗೆ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ

ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ ೨೦, ೨೧, ೨೨ ರಂದು ನಡೆಯಲಿದ್ದು. ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ಪ್ರಾರಂಭಿಸಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ನೂತನ ಕಚೇರಿಯನ್ನು ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದ್ದಾರೆ. ಕಚೇರಿಯಲ್ಲಿ ಕವಿವಾಣಿಗಳ ಕಾವ್ಯದ ಸಿಂಚನಗಳ ಪಲಕಗಳನ್ನು ಅಳವಡಿಸಿ ಕನ್ನಡದ ಕಂಪು ಸೂಸುವಂತೆ ಮಾಡಲಾಗಿದೆ. ಕಚೇರಿ ಉದ್ಘಾಟನೆಯ ನಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ನೆನಪಿಸಲಿ ಎಂದು
ಶ್ರೀಗಂಧದ ಗಿಡವನ್ನು ನೆಟ್ಟಿ ನೀರೆರೆದರು.

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ಶಾಸಕ ಪಿ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ, ಜಿಲ್ಲಾಧಿಕಾರಿ ಡಾ; ಕುಮಾರ, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular